Advertisement

45 ವರ್ಷ ಮೇಲ್ಪಟ್ಟ ಪೊಲೀಸರಿಗೆ ಕೋವಿಡ್ ಲಸಿಕೆ ಕಡ್ಡಾಯ : ಪ್ರವೀಣ್ ಸೂದ್

07:06 PM Apr 18, 2021 | Team Udayavani |

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪೊಲೀಸ್ ಸಿಬ್ಬಂದಿಯ ಯೋಗಕ್ಷೇಮ ಕಾಪಾಡಿಕೊಳ್ಳಲು ಡಿಜಿ ಐಜಿಪಿ ಪ್ರವೀಣ್ ಸೂದ್ ಕೆಲವು ಸೂಚನೆಗಳನ್ನು ನೀಡಿದ್ದಾರೆ. 45 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿ ಮತ್ತು ಅವರ ಮನೆಯವರಿಗೆ ಕೋವಿಡ್ ಲಸಿಕೆ ಕಡ್ಡಾಯ ಎಂದು ತಿಳಿಸಿದ್ದಾರೆ.

Advertisement

ಇನ್ನು ಯಾವ ಸಿಬ್ಬಂದಿಯು ಅನಾರೋಗ್ಯದಿಂದ ಬಳಲುತ್ತಿದ್ದಾರೋ ಅಂತವರನ್ನು ಕೇವಲ ಕಚೇರಿ ಕೆಲಸಕ್ಕೆ ಮಾತ್ರ ನೇಮಿಸಬೇಕು. ಹಾಗೂ ಪೊಲೀಸರು ಮೂರು ಪಾಳಿಯಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.

ಕೋವಿಡ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾತನಾಡಿದ ಪ್ರವೀಣ್ ಸೂದ್, ಪ್ರತೀ ಸಿಬ್ಬಂದಿ ಕೂಡ ಮಾಸ್ಕ್ ಮತ್ತು ಫೇಸ್ ಶೀಲ್ಡ್ ಕಡ್ಡಾಯವಾಗಿ ಧರಿಸಬೇಕು. ಅಲ್ಲದೆ ಪೊಲೀಸ್ ಠಾಣೆಯ ಒಳಗೆ ಮತ್ತು ಹೊರಗಡೆ ಸ್ಯಾನಿಟೈಸಿಂಗ್ ಮಾಡಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಪೊಲೀಸರನ್ನು ಭೇಟಿಯಾಗಲು ಬಂದ ಸಾರ್ವಜನಿಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು. ಹಾಗೂ ಪೊಲೀಸ್ ವಾಹನಗಳಿಗೂ ಸ್ಯಾನಿಟೈಸ್ ಮಾಡಬೇಕು ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next