Advertisement

ಸೂಕ್ತ ಭಧ್ರತೆಯಲ್ಲಿ ಚಿಕ್ಕಬಳ್ಳಾಪುರಕ್ಕೆ ಕೋವಿಡ್-19 ಲಸಿಕೆ ಆಗಮನ : ಸುರಕ್ಷಿತವಾಗಿ ಶೇಖರಣೆ

11:49 PM Jan 13, 2021 | Team Udayavani |

ಚಿಕ್ಕಬಳ್ಳಾಪುರ: ಬಹು ನಿರೀಕ್ಷಿತ ಕೋವಿಡ್-19 ಲಸಿಕೆಯು ಸೂಕ್ತ ಪೊಲೀಸ್ ಭದ್ರತೆದೊಂದಿಗೆ ಬುಧವಾರ ಸಂಜೆ ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರಕ್ಕೆ ಆಗಮಿಸಿತು.

Advertisement

ಜಿಲ್ಲಾಧಿಕಾರಿ ಆರ್. ಲತಾ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ಲಸಿಕೆಯನ್ನು ಸೂಕ್ತ ಭದ್ರತೆಯೊಂದಿಗೆ ಜಿಲ್ಲಾಡಳಿತ ಭವನದ ಜಿಲ್ಲಾ ಆರೋಗ್ಯ ಇಲಾಖೆಯ ದಾಸ್ತಾನಿ ಕೊಠಡಿಯಲ್ಲಿ ಸುರಕ್ಷಿತವಾಗಿ ಶೇಖರಣೆ ಮಾಡಲಾಯಿತು.

ಜಿಲ್ಲೆಯಲ್ಲಿ ಜನವರಿ 16 ರಿಂದ ಮೊದಲ ಹಂತದ ಕೋವಿಡ್ ಲಸಿಕೆ ವಿತರಣೆಗೆ ಚಾಲನೆ ದೊರೆಯಲಿದೆ. ಪ್ರಸ್ತುತ ಜಿಲ್ಲೆಗೆ 500 ವಾಯಿಲ್ಸ್(ಡೋಸ್) ನಷ್ಟು ಲಸಿಕೆ ಬಂದಿದ್ದು, ಇದನ್ನು ಸುಮಾರು 5000 ಜನರಿಗೆ ಲಸಿಕೆ ನೀಡಬಹುದಾಗಿದೆ. ಪ್ರಸ್ತುತ ಜನವರಿ 16 ರಂದು ಮೊದಲ ಹಂತದಲ್ಲಿ ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆಯ 853  ಮಂದಿ ಕಾರ್ಯಕರ್ತರಿಗೆ(ವಾರಿಯರ್ಸ್)  ರಾಜ್ಯ ಸರಕಾರದ ಮಾರ್ಗಸೂಚಿಯಂತೆ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ನಂತರದ ದಿನಗಳಲ್ಲಿ ಉಳಿದ 4000 ಜನರಿಗೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದಿರಾ ಆರ್.ಕಬಾಡೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next