ಚಾಮರಾಜನಗರ: ಕೋವಿಡ್-19 ರೋಗ ನಿರೋಧಕ ಶಕ್ತಿ ಒದಗಿಸುವ ಕೋವಿಡ್- ಲಸಿಕೆ ನೀಡುವ ಕಾರ್ಯದಲ್ಲಿ ಜಿಲ್ಲೆ ಗಣನೀಯ ಪ್ರಗತಿಯತ್ತಸಾಗಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆನೀಡುವ ಮೂಲಕ ಉತ್ತಮ ಸಾಧನೆ ಮಾಡಿದೆ.ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1,01,586 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.
ಜ.16 ರಂದು ಜಿಲ್ಲೆಯಲ್ಲಿ ಕೋವಿಡ್ ವಾರಿಯರ್ಸ್ ಗಳೆಂದೇ ಕರೆಯಲ್ಪಡುವ ವೈದ್ಯರು ಸೇರಿದಂತೆ ಆರೋಗ್ಯ ಸೇವೆಯಲ್ಲಿ ತೊಡಗಿಕೊಂಡಿರುವ ಎಲ್ಲಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆನೀಡುವ ಅಭಿಯಾನ ಆರಂಭವಾಯಿತು. ಬಳಿಕ ಕಂದಾಯ, ಪೊಲೀಸ್, ನಗರಾಭಿವೃದ್ಧಿ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿ ಸಿಬ್ಬಂದಿಯನ್ನೊಳಗೊಂಡ ಮುಂಚೂಣಿ ಕಾರ್ಯಕರ್ತರಿಗೆಕೋವಿಡ್
ಲಸಿಕೆ ಕಾರ್ಯ ಆರಂಭವಾಯಿತು. ಮಾರ್ಚ್ 1 ರಿಂದ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು,ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷಮೇಲ್ಪಟ್ಟವರಿಗೆ ಲಸಿಕೆ ನೀಡಲು ಪ್ರಾರಂಭಿಸಲಾಯಿತು. ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂಉಚಿತವಾಗಿ ಲಸಿಕೆ ನೀಡುವ ಮಹತ್ತರ ಅಭಿಯಾನ ಆರಂಭಗೊಂಡಿತು.
3 ಲಕ್ಷ ಮಂದಿ 45 ವರ್ಷ ಮೇಲ್ಪಟ್ಟವರು: ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟವರು 2,97,000 ಮಂದಿ ಇದ್ದು, ಈ ಎಲ್ಲರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಈ ಪೈಕಿ 45 ರಿಂದ 59 ರ ವಯೋಮಾನದವರು 1,96,530 ಜನರಿದ್ದಾರೆ. 60 ವರ್ಷ ಮೇಲ್ಪಟ್ಟವರು 1,00,470 ಜನರಿದ್ದಾರೆ. ಇದುವರೆಗೆಅಂದರೆ, ಏಪ್ರಿಲ್ 10ರ ಶುಕ್ರವಾರದವರೆಗೆ ಜಿಲ್ಲೆಯಲ್ಲಿಒಟ್ಟು 1,01,586 ಮಂದಿಗೆ ಕೋವಿಡ್ ಲಸಿಕೆನೀಡಲಾಗಿದೆ. ಪ್ರತಿದಿನ 3ರಿಂದ 5 ಸಾವಿರ ಮಂದಿಗೆ ಲಸಿಕೆ ಹಾಕಲಾಗುತ್ತಿದೆ.
ಲಸಿಕೆ ನೀಡಲು ಜಿಲ್ಲಾದ್ಯಂತ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿರುವ 60 ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಂತೆಮರಹಳ್ಳಿ, ಬೇಗೂರುಹಾಗೂ ಕಬ್ಬಳಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರ, ಕೊಳ್ಳೇಗಾಲ, ಯಳಂದೂರು, ಗುಂಡ್ಲುಪೇಟೆ ತಾಲೂಕು ಆಸ್ಪತ್ರೆ, ಕೊಳ್ಳೇಗಾಲ, ಚಾಮರಾಜನಗರ ಪಟ್ಟಣದಲ್ಲಿರುವ ನಗರ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ.
ಜಿಲ್ಲೆಯಲ್ಲಿ ಲಸಿಕೆ ಪಡೆದವರ ವಿವರ : ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಭರದಿಂದ ಸಾಗಿದೆ. ಒಟ್ಟಾರೆ ಇದುವರೆಗೆ 10,601ಆರೋಗ್ಯ ಕಾರ್ಯಕರ್ತರು, 4,301ಮುಂಚೂಣಿ ಕಾರ್ಯಕರ್ತರು ಲಸಿಕೆಪಡೆದುಕೊಂಡಿದ್ದಾರೆ. 45 ರಿಂದ 59 ಹಾಗೂ 60 ವರ್ಷ ಮೇಲ್ಪಟ್ಟವರು ಸೇರಿದಂತೆ ಇದುವರೆಗೆ ಒಟ್ಟು 1,01,586 ಜನರು ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.
-ಕೆ.ಎಸ್. ಬನಶಂಕರ ಆರಾಧ್ಯ