Advertisement
ಆದರೆ 45 ವರ್ಷ ವಯೋಮಿತಿಯ ಇತರ ಆರೋಗ್ಯ ಸಮಸ್ಯೆಗಳುಳ್ಳ ಮಂದಿ ಲಸಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿರುವ ಪ್ರಮಾಣ ಕುಂಠಿತವಾಗಿದ್ದು, ಈ ಬಗ್ಗೆ ವಿಶ್ಲೇಷಿಸಬೇಕಾಗಿದೆ. ರಾಷ್ಟ್ರಪತಿ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವು ಗಣ್ಯರು ಲಸಿಕೆ ಪಡೆದುಕೊಳ್ಳುವ ಮೂಲಕ ಇಡೀ ಸಮಾಜಕ್ಕೆ ಹೊಸ ಭರವಸೆ ಮೂಡಿಸಿದ್ದಾರೆ. ಇದೇ ಸಂದರ್ಭದಲ್ಲಿ ಲಸಿಕೆ ಪ್ರಕ್ರಿಯೆಯಲ್ಲಿ ಕಾಣಿಸುತ್ತಿರುವ ಹಲವು ಸಮಸ್ಯೆ ಗಳನ್ನು ಕೂಡಲೇ ಬಗೆಹರಿಸಬೇಕಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ಸಾಕಷ್ಟು ವ್ಯತ್ಯಯಗಳಾಗುತ್ತಿರುವುದು ಎದ್ದು ಕಾಣುತ್ತಿದೆ. ಸರ್ವರ್ ಸಮಸ್ಯೆಯಿಂದ ನೋಂದಣಿ ಪ್ರಕ್ರಿಯೆ ಸುಲಲಿತವಾಗಿಲ್ಲ ಎಂಬ ದೂರಿದೆ. ಈ ನಿಟ್ಟಿನಲ್ಲಿ ತಾಂತ್ರಿಕ ಸಮಸ್ಯೆಯನ್ನು ಆದಷ್ಟು ಶೀಘ್ರ ಪರಿಹರಿಸಬೇಕಿದೆ. ಈಗಾಗಲೇ ದಿನದ 24 ಗಂಟೆಯೂ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ದೊರೆತಿರುವುದು ಅನುಕೂಲಕರವೇ. ಆದರೆ ನೋಂದಣಿ ಸಹ ನಿರಾಯಾಸವಾಗಿ ದಿನದ 24 ಗಂಟೆಯೂ ಆಗುವಂತಿದ್ದರೆ ಹಿರಿಯ ನಾಗರಿಕರು ಆಸ್ಪತ್ರೆಯಲ್ಲಿ ಅಲೆದಾಡುವುದು ತಪ್ಪುತ್ತದೆ. ಹಲವು ಆಸ್ಪತ್ರೆಗಳಲ್ಲಿ ಲಸಿಕೆ ಪಡೆದುಕೊಳ್ಳುವುದಕ್ಕಿಂತ ನೋಂದಣಿಗೆ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಇದನ್ನು ತಪ್ಪಿಸಬೇಕಾದರೆ ಪ್ರತೀ ಆಸ್ಪತ್ರೆಯಲ್ಲೂ ನಾಲ್ಕರಿಂದ ಐದು ಕೌಂಟರ್‌ಗಳನ್ನು ತೆರೆಯಬೇಕು.
Advertisement
ಲಸಿಕೆ ನೋಂದಣಿ ಪ್ರಕ್ರಿಯೆ ಸರಳೀಕರಣವಾಗಬೇಕು
11:07 PM Mar 04, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.