Advertisement

1.20 ಲಕ್ಷ ಮಕ್ಕಳಿಗೆ ಕೋವಿಡ್‌ ಲಸಿಕೆ ಗುರಿ

12:24 PM Mar 17, 2022 | Team Udayavani |

ಕಲಬುರಗಿ: ಜಿಲ್ಲೆಯಾದ್ಯಂತ 12ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ಕಾರ್ಯಕ್ಕೆ ಬುಧವಾರ ಇಲ್ಲಿನ ಜಿಮ್ಸ್‌ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಯಶವಂತ್‌ ವಿ. ಗುರುಕರ್‌ ಚಾಲನೆ ನೀಡಿದರು.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಮ್ಸ್‌ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿಗಳು, 12ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಾರ್ಬಿವ್ಯಾಕ್ಸ್‌ ಕೋವಿಡ್‌ ಲಸಿಕೆ ಮತ್ತು 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕೆ ಲಸಿಕಾ ಡೋಸ್‌ ನೀಡಲಾಗುತ್ತಿದ್ದು, ಎಲ್ಲ ಅರ್ಹರು ಲಸಿಕೆ ಪಡೆಯಬೇಕೆಂದು ತಿಳಿಸಿದರು. ಜಿಲ್ಲೆಯಲ್ಲಿ 12ರಿಂದ 14 ವರ್ಷದೊಳಗಿನ 1.20 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಶರಣಬಸಪ್ಪ ಗಣಜಲಖೇಡ್‌, ಜಿಮ್ಸ್‌ ಮೆಡಿಕಲ್‌ ಕಾಲೇಜಿನ ನಿರ್ದೇಶಕಿ ಡಾ| ಕವಿತಾ ಪಾಟೀಲ, ವೈದ್ಯಕೀಯ ಅಧಿಧೀಕ್ಷಕ ಡಾ| ಶಫಿ ಯೂದ್ದೀನ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಶೋಕ ಭಜಂತ್ರಿ, ಆರ್‌ಸಿಎಚ್‌ ಅಧಿಕಾರಿ ಡಾ| ಪ್ರಭುಲಿಂಗ ಮಾನಕರ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಭಾಗೀಯ ಉಪನಿರ್ದೇಶಕ ಡಾ| ಹಬೀಬ್‌ ಉಸ್ಮಾನ್‌, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ಶರಣಬಸಪ್ಪ ಕ್ಯಾತನಾಳ, ವೈದ್ಯಾಧಿಕಾರಿ ಡಾ| ಮಾರುತಿ ಕಾಂಬ್ಳೆ, ಸೆಂಟ್‌ ಜಾನ್‌ ಸಂಸ್ಥೆ ವೈದ್ಯ ಡಾ| ಮಲ್ಲಾರಾವ್‌ ಮಲ್ಲೆ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಈ ಸಂದರ್ಭದಲ್ಲಿದ್ದರು.

ಅಜಾದಿ ಕಾ ಅಮೃತ್‌ ಮಹೋತ್ಸವ ಅಂಗವಾಗಿ ಕೋವಿಡ್‌ ನಿರ್ವಹಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲೆಯ ಅಫಜಲಪುರ, ಕಲಬುರಗಿ ನಗರ, ಕಲಬುರಗಿ ಗ್ರಾಮೀಣ, ಆಳಂದ, ಚಿಂಚೋಳಿ, ಚಿತ್ತಾಪುರ, ಜೇವರ್ಗಿ, ಸೇಡಂ ತಾಲೂಕಿನ ಆರೋಗ್ಯಾಧಿಕಾರಿ, ವೈದ್ಯಾಧಿಕಾರಿ, ಆರೋಗ್ಯ ನಿರೀಕ್ಷಕರು, ಪ್ರಾಥಮಿಕ ಆರೋಗ್ಯ ನಿರೀಕ್ಷಣಾಧಿಕಾರಿ, ಆಶಾ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next