Advertisement

ಕೋವಿಡ್ ಲಸಿಕೆ: ಮಹಿಳೆಯರ ಕಣ್ಣೀರು, ಹೈಡ್ರಾಮಾ ಮಾಡಿ ಪರಾರಿ

04:31 PM Dec 17, 2021 | Team Udayavani |

ಬೀದರ್ : ಆರೋಗ್ಯ ಸಿಬ್ಬಂದಿಗಳು ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸುತ್ತಿದ್ದ ವೇಳೆ ಮಹಿಳೆಯೊಬ್ಬಳು ಕಣ್ಣೀರು ಹಾಕುತ್ತಾ ಹೈಡ್ರಾಮಾ ಮಾಡಿ, ಸ್ಥಳದಿಂದ ಪರಾರಿಯಾಗಿರುವ ಘಟನೆ ನಗರದ ಶಿವಾಜಿ ವೃತ್ತದಲ್ಲಿ ಶುಕ್ರವಾರ ನಡೆದಿದೆ.

Advertisement

ನಗರ ಸೇರಿ ಜಿಲ್ಲೆಯಾದ್ಯಂತ ಜಿಲ್ಲಾಡಳಿತದಿಂದ ಲಸಿಕಾ ಮಹಾಮೇಳ ನಡೆಸಲಾಗುತ್ತಿದ್ದು, ಈ ವೇಳೆ ಆಟೋದಲ್ಲಿ ಬಂದ ಮೂವರು ಮಹಿಳೆಯರನ್ನು ನಿಲ್ಲಿಸಿ ಲಸಿಕೆ ಹಾಕಿಸಿಕೊಳ್ಳಿ ಎಂದು ಆರೋಗ್ಯ ಸಿಬ್ಬಂದಿಗಳು ಹೇಳಿದ್ದಾರೆ. ಈ ವೇಳೆ ಓರ್ವ ಮಹಿಳೆ ಕಣ್ಣೀರು ಹಾಕುತ್ತಾ ಸ್ಥಳದಿಂದ ಕಾಲ್ಕಿತ್ತಿದರೆ ಉಳಿದ ಇಬ್ಬರು ಮಹಿಳೆಯರು ಲಸಿಕೆ ತೆಗೆದುಕೊಳ್ಳದೆ ಸ್ಥಳದಿಂದ ಪಲಾಯನವಾಗಿದ್ದಾರೆ

ಯಾಕೆ ಕಣ್ಣೀರು ಹಾಕುತ್ತಿದ್ದಿಯಾ ಎಂದು ಆರೋಗ್ಯ ಸಿಬ್ಬಂದಿಗಳು ಕೇಳಿದರೆ ಯಾವುದೇ ಉತ್ತರ ನೀಡದೆ ಮಹಿಳೆ ಸ್ಥಳದಲ್ಲಿ ಹೈಡ್ರಾಮಾ ಮಾಡಿದ್ದಾರೆ. ಈಗಾಗಲೇ ಶೇ. 96ರಷ್ಟು ಮೊದಲ ಡೋಸ್ ಲಸಿಕಾಕರಣ ಮಾಡಲಾಗಿದ್ದು, ಉಳಿದ ಶೇ.4 ರಷ್ಟು ಲಸಿಕೆ ನೀಡುವುದೇ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next