ಕೆ.ಆರ್.ನಗರ: ಮನುಷ್ಯ ತಾನು ಬದುಕಿರುವಷ್ಟು ದಿನ ಸಮಾಜಮುಖೀ ಕೆಲಸ ಮಾಡು ವುದರ ಮೂಲಕ ಜೀವನ ಸಾರ್ಥಕಪಡಿಸಿ ಕೊಳ್ಳಬೇಕು ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ಪಟ್ಟಣದ ಎಚ್.ಡಿ.ದೇವೇಗೌಡ ಭವನದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದಿಂದ ನಡೆದ ಪ್ರತಿಭಾ ಪುರಸ್ಕಾರ ಮತ್ತು ಕೋವಿಡ್ ವಾರಿಯರ್ಸ್ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಸಾಧಕರನ್ನು ಗೌರವಿಸಿದರೆ ಸಾಧನೆ ಮಾಡಲು ಮತ್ತಷ್ಟು ಪ್ರೇರಣೆಯಾಗುತ್ತದೆ ಎಂದರು.
ಸರ್ಕಾರಿ ನೌಕರರ ಸಂಘಟನೆಯ ಪದಾಧಿಕಾರಿಗಳು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡುವುದರ ಜತೆಗೆ ಕೋವಿಡ್ ಸಮಯದಲ್ಲಿ ಜನಸೇವೆ ಮಾಡಿದ ಆರೋಗ್ಯ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿಯನ್ನು ಗೌರವಿಸುತ್ತಿರುವುದು ಸಂತಸದ ಸಂಗತಿ. ಸಂಘಟನೆಗಳ ಸಮಾಜಮುಖೀ ಕೆಲಸಗಳಿಗೆ ನಾನು ಸದಾ ಸಹಾಯ ಮಾಡುತ್ತೇನೆ ಎಂದರು. ಕಾರ್ಯಕ್ರಮದಲ್ಲಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ನೀಡಲಾಯಿತು. ಜತೆಗೆ ಕೋವಿಡ್ ವಾರಿಯರ್ಸ್ ಗಳಾದ ಆರೋಗ್ಯ ಮತ್ತು ಪೊಲೀಸ್ ಸಿಬ್ಬಂದಿಗೆ ನೆನಪಿನ ಕಾಣಿಕೆ ನೀಡಿ ಅಭಿನಂದಿಸಲಾಯಿತು.
ಈ ವೇಳೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಜೆ. ಗೋವಿಂದರಾಜು, ತಾಲೂಕು ಅಧ್ಯಕ್ಷ ಎಚ್.ಡಿ. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಸಿ.ಜೆ. ಅರುಣ್‌ಕುಮಾರ್, ರಾಜ್ಯ ಪರಿಷತ್ ಸದಸ್ಯ ಕೆ.ವಿ.ರಮೇಶ್, ತಾಲೂಕು ಆರೋಗ್ಯಾಧಿಕಾರಿಡಾ.ಕೆ.ಆರ್.ಮಹೇಂದ್ರಪ್ಪ, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಎಂ.ಎಸ್. ನಾಗೇಂದ್ರ, ಸಮಾಜ ಕಲ್ಯಾಣ ಇಲಾಖೆಸಹಾಯಕ ನಿರ್ದೇಶಕ ಅಶೋಕ್‌ಕುಮಾರ್,ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆತಾಲೂಕು ವಿಸ್ತರಣಾಧಿಕಾರಿ ಜಿ.ಜೆ.ಮಹೇಶ್,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್. ಆರ್.ಸಿದ್ದಯ್ಯ ಮತ್ತಿತರರು ಉಪಸ್ಥಿತರಿದ್ದರು.