Advertisement

ಕೋವಿಡ್ ವಾರಿಯರ್ಸ್‌ ಸೇವೆ ಶ್ಲಾಘನೆ-ಅಭಿನಂದನೆ

11:46 AM Jun 01, 2020 | Suhan S |

ಬೆಳಗಾವಿ: ಕೋವಿಡ್ ಸೋಂಕು ತಡೆಯಲು ದಿನದ 24 ಗಂಟೆಗಳ ಕಾಲ ಶ್ರಮಿಸುತ್ತಿರುವ ಪೊಲೀಸ್‌, ಆರೋಗ್ಯ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರನ್ನು ಇಲ್ಲಿನ ರಾಮತೀರ್ಥ ನಗರದ ನಿವಾಸಿಗಳು ರವಿವಾರ ಸತ್ಕರಿಸಿ ಮೆರವಣಿಗೆ ನಡೆಸಿದರು. ರಾಮತೀರ್ಥ ನಗರದ ಗಣೇಶ ವೃತ್ತದಿಂದ ಪ್ಯಾರಡೈಸ್‌ ಹಾಲ್‌ವರೆಗೆ ಮೆರವಣಿಗೆ ನಡೆಸಿ ಗೌರವ ಸಲ್ಲಿಸಲಾಯಿತು.

Advertisement

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಶಾಸಕ ಅನಿಲ ಬೆನಕೆ, ಬುಡಾ ಅಧ್ಯಕ್ಷ ಗೂಳಪ್ಪ ಹೊಸಮನಿ ಮೊದಲಾದವರು ಮೆರವಣಿಗೆಯಲ್ಲಿ ಪಾಲ್ಗೊಂಡು ಕೋವಿಡ್ ಸೇನಾನಿಗಳ ಮೇಲೆ ಹೂ ಮಳೆ ಸುರಿಸಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುರೇಶ ಅಂಗಡಿ, ಕೋವಿಡ್  ಸೋಂಕು ತಡೆಯುವಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿರುವ ಎಲ್ಲರನ್ನೂ ಕೋವಿಡ್  ವಾರಿಯರ್ಸ್‌ ಎಂದು ಪ್ರಧಾನಿ ನರೇಂದ್ರ ಮೋದಿ ಕರೆದಿದ್ದಾರೆ.

ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಕೋವಿಡ್ ಸೋಂಕು ನಿಯಂತ್ರಣದಲ್ಲಿದೆ. ಹೀಗಾಗಿ ಈ ಯೋಧರು ಸಾರ್ವಜನಿಕರ ದೃಷ್ಟಿಯಲ್ಲಿ ದೇವರಾಗಿ ಕಾಣುತ್ತಿದ್ದಾರೆ. ಅವರನ್ನು ಗೌರವಿಸುವುದು ಸಮಾಜದ ಕರ್ತವ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ನಿಗಮದ ಅಧ್ಯಕ್ಷ ಮುಕ್ತಾರ ಪಠಾಣ, ಬಿಜೆಪಿ ಮಹಾನಗರ ಘಟಕದ ಅಧ್ಯಕ್ಷ ಶಶಿ ಪಾಟೀಲ, ಬಿಜೆಪಿ ಬೆಳಗಾವಿ ಉತ್ತರ ಘಟಕದ ಅಧ್ಯಕ್ಷ ಪಾಂಡುರಂಗ ಧಾಮನೇಕರ, ಎಸಿಪಿ ನಾರಾಯಣ ಭರಮನಿ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next