Advertisement

ಪೋಷಕರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ಸರ್ಕಾರದ ಯೋಜನೆಗೆಳು ತೃಪ್ತಿದಾಯಕ : ಸುಪ್ರೀಂ

04:27 PM Aug 30, 2021 | Team Udayavani |

ನವ ದೆಹಲಿ : ಕೋವಿಡ್ ಸಾಂಕ್ರಾಮಿಕ ಸೊಂಕಿನಿಂದಾಗಿ ತಮ್ಮ ಪೋಷಕರನ್ನು ಕಳೆದುಕೊಂಡ ಮಕ್ಕಳ ಬಗ್ಗೆ ಕಾಳಜಿ ವಹಿಸಿ ಅವರ ಪಾಲಿಗೆ ಆಸರೆ ಆಗುವ ಉದ್ದೇಶದಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೂಗೊಂಡಿರುವ ಯೋಜನೆಗಳು ಸಮಾಧಾನಕರವಾಗಿದೆ ಎಂದು ಸುಪ್ರೀಂ ಕೋರ್ಟ್ (ಆಗಸ್ಟ್ 30) ಹೇಳಿದೆ.

Advertisement

ಕೋವಿಡ್ ಸಾಂಕ್ರಾಮಿಕ ಸೋಂಕಿನಿಂದ ದೇಶದಲ್ಲಿ ಲಕ್ಷಾಂತರ ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಮಕ್ಕಳು ಸೋಂಕಿನ ಕಾರಣದಿಂದಾಗಿ ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡಿದ್ದಾರೆ. ಅಂತವರಿಗೆ ನೆರವಾಗುವ ದೃಷ್ಟಿಯಿಂದ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳು ತೃಪ್ತದಾಯಕವಾಗಿದೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ : ಅಫ್ಘಾನ್ ಗೆ ಮರಳಿದ ಒಸಾಮ ಬಿನ್ ಲಾಡೆನ್ ನ ಮಾಜಿ ಆಪ್ತ ಸಹಾಯಕ ಅಮಿನ್ ಉಲ್ ಹಖ್

ನ್ಯಾಯಮೂರ್ತಿಗಳಾದ ಎಲ್‌ ನಾಗೇಶ್ವರರಾವ್ ಮತ್ತು ಅನಿರುದ್ಧ ಬೋಸ್‌ ಅವರನ್ನೊಳಗೊಂಡ ನ್ಯಾಯಪೀಠ, ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಅನಾಥವಾಗಿರುವ ಮಕ್ಕಳ ಬಗ್ಗೆಎ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕೈಗೊಂಡಿರುವ ಯೋಜನೆಗಳನ್ನು ಶ್ಲಾಘಿಸಿದ್ದು,  ತಂದದೆ ತಾಯಿಯನ್ನು ಕಳೆದುಕೊಂಡಿರುವ ಮಕ್ಕಳಿಗೆ, ತಕ್ಷಣ ಮೂಲಸೌಲಭ್ಯ ಕಲ್ಪಿಸಲು ಅಧಿಕಾರಿಗಳು ವಿಳಂಬ ಮಾಡುವುದಿಲ್ಲ ಎಂಬ ವಿಶ್ವಾಸವಿದೆ’ ಎಂದು ಹೇಳಿದೆ.

‘ಮಕ್ಕಳ ರಕ್ಷಣಾ ಮನೆಗಳಲ್ಲಿ ಕೋವಿಡ್‌–19 ಸಾಂಕ್ರಾಮಿಕದ‘ ಕುರಿತ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ನಡೆಸುವ ವೇಳೆ, ನ್ಯಾಯಪೀಠ, ‘ದೇಶದಲ್ಲಿ ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಸುಮಾರು ಒಂದು ಲಕ್ಷ ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡಿದ್ದಾರೆ.

Advertisement

ಇದೇ ವೇಳೆ, ‘ಬಾಲ ನ್ಯಾಯ ಸಮಿತಿ (ಸಿಡಬ್ಲ್ಯೂಸಿ) ಯ ವಿಚಾರಣೆಗಳು, ಬಾಲ ನ್ಯಾಯ (ಮಕ್ಕಳ ಕಾಳಜಿ ಮತ್ತು ರಕ್ಷಣೆ) ಕಾಯ್ದೆ, 2015 ರ ಅನುಸಾರವಾಗಿ, ಆರೈಕೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳನ್ನು ಗುರುತಿಸುವುದನ್ನು ತ್ವರಿತಗೊಳಿಸಬೇಕು‘ ಎಂದು ನ್ಯಾಯಪೀಠ ಸರ್ಕಾರಕ್ಕೆ ಸೂಚಿಸಿದೆ.

ಇನ್ನು, ‘ಅಪ್ರಾಪ್ತ ವಯಸ್ಕರಿಗೆ ಅಗತ್ಯವಿರುವ ಯೋಜನೆಗಳ ಪ್ರಯೋಜನಗಳು ತಲುಪುವಂತೆ ಮಾಡಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೂಡ ಹೇಳಿದೆ.

ಎಲ್ಲಾ ಮಕ್ಕಳಿಗೆ ಸಂವಿಧಾನದ ಪ್ರಕಾರ ಉಚಿತ ಮತ್ತು ಕಡ್ಡಾಯವಾಗಿ ಪ್ರಾಥಮಿಕ ಶಿಕ್ಷಣವನ್ನು ಪಡೆದುಕೊಳ್ಳುವ ಹಕ್ಕಿದೆ. ಸುಲಭವಾಗಿ ಮಕ್ಕಳಿಗೆ ಶಿಕ್ಷಣ ಸಿಗುವಂತೆ ಮಾಡುವುದು ರಾಜ್ಯ ಸರ್ಕಾರದ ಕರ್ತವ್ಯ ಮತ್ತು ಬಾಧ್ಯತೆ ಎಂದು ಸುಪ್ರೀಂ ಹೇಳಿದೆ.

ಇದನ್ನೂ ಓದಿ : ಅಫ್ಘಾನ್ ಗೆ ಮರಳಿದ ಒಸಾಮ ಬಿನ್ ಲಾಡೆನ್ ನ ಮಾಜಿ ಆಪ್ತ ಸಹಾಯಕ ಅಮಿನ್ ಉಲ್ ಹಖ್

Advertisement

Udayavani is now on Telegram. Click here to join our channel and stay updated with the latest news.

Next