ಬೆಂಗಳೂರು: ಇಂದಿನಿಂದ 9 ದಿನಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಕೋವಿಡ್ ಸೋಂಕಿನ ರೂಪಾಂತರ ಹಾವಳಿ ಭೀತಿ ಹೆಚ್ಚಾಗಿರುವುದರಿಂದ ಇಂದಿನಿಂದ 9 ದಿನಗಳ ಕಾಲ ಪ್ರತಿದಿನ ರಾತ್ರಿ 10ರಿಂದ ಬೆಳಗ್ಗೆ 6 ರವರೆಗೆ ಈ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ಈ ಸಮಯದಲ್ಲಿ ವ್ಯಾಪಾರ-ವಹಿವಾಟುಗಳು , ಬಸ್ ಸಂಚಾರ, ಪಬ್ -ಬಾರ್ ಮುಂತಾದವುಗಳು ಬಂದ್ ಆಗಿರುತ್ತವೆ ಎಂದು ತಿಳಿಸಿದ್ದಾರೆ
ಇದರಿಂದ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೂ ಬ್ರೇಕ್ ಬಿದ್ದಂತಾಗಿದ್ದು, ‘ನವರಾತ್ರಿ’ಗಳ ಕಾಲ ಕರುನಾಡು ಸಂಪೂರ್ಣ ಸ್ಥಬ್ಥವಾಗಲಿದೆ.
ಇಂದು ಸಂಜೆ 5 ಗಂಟೆಗೆ ನೈಟ್ ಕರ್ಫ್ಯೂ ಕುರಿತ ಮಾರ್ಗಸೂಚಿ ಹೊರಬೀಳಲಿದೆ. ಬ್ರಿಟನ್ ನಿಂದ ಬರುವಂತವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ರಾಜ್ಯಕ್ಕೆ ಯುಕೆಯಿಂದ ಬಂದಿರುವಂತವರನ್ನು ಪತ್ತೆ ಹಚ್ಚಿ, ಅವರನ್ನು ಕೋವಿಡ್-19 ಸೋಂಕು ಪತ್ತೆಗಾಗಿ ಆರ್ ಟಿ-ಪಿಸಿಆರ್ ಮೂಲಕ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಆ ಮೂಲಕ ಹೊಸ ಕೋವಿಡ್ ರೂಪಾಂತರದ ಅಲೆಯ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ. ಆ ಬಗ್ಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಇದೇ ವೇಳೆ ಸಿಎಂ ಬಿಎಸ್ ವೈ ತಿಳಿಸಿದ್ದಾರೆ.
updating…