Advertisement

ಕರ್ನಾಟಕ ಕೋವಿಡ್-19 ಕಳವಳ: ರಾಜ್ಯದಲ್ಲಿಂದು 378 ಜನರಿಗೆ ಸೋಂಕು ದೃಢ

06:09 PM Jun 06, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಜನರ ದೇಹಕ್ಕೆ ಕೋವಿಡ್-19 ಸೋಂಕು ಸೇರಿರುವುದು ಇಂದು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ ಐದು ಸಾವಿರ್ ಗಡಿ ದಾಟಿದ್ದು, 5213ಕ್ಕೆ ಏರಿಕೆಯಾಗಿದೆ.

Advertisement

ಇಂದೂ ಕೂಡಾ ಕೋವಿಡ್-19 ಸೋಂಕಿತರಲ್ಲಿ ಹೆಚ್ಚಿನವರು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬಂದವರೇ ಆಗಿದ್ದಾರೆ. ಇಂದು ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಅಂದರೆ 121 ಜನರಿಗೆ ಸೋಂಕು ಕಾಣಿಸಿಕೊಂಡರೆ, ಯಾದಗಿರಿ ಜಿಲ್ಲೆಯಲ್ಲಿ103 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ.

ಕಲಬುರಗಿಯಲ್ಲಿ ಇಂದು 69 ಹೊಸ ಸೋಂಕು ಪ್ರಕರಣಗಳು ಕಂಡುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಹೊಸ ಪ್ರಕರಣಗಳು, ಬೆಂಗಳೂರು ನಗರದಲ್ಲಿ 18 ಪ್ರಕರಣಗಳು ದೃಢವಾಗಿದೆ.

ವಿಜಯಪುರ ಮತ್ತು ದಾವಣಗೆರೆಯಲ್ಲಿ ತಲಾ ಆರು ಪ್ರಕರಣಗಳು, ಬೆಳಗಾವಿ ಐದು, ಮಂಡ್ಯ, ಹಾಸನ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ತಲಾ ಮೂರು, ರಾಯಚೂರು, ಚಿಕ್ಕಬಳ್ಳಾಪುರ, ಉತ್ತರ ಕನ್ನಡದಲ್ಲಿ ತಲಾ ಎರಡು ಸೋಂಕು ಪ್ರಕರಣಗಳು ದೃಢವಾಗಿದ್ದರೆ, ಬೀದರ್, ತುಮಕೂರು, ಕೋಲಾರ, ಕೊಪ್ಪಳ ಜಿಲ್ಲೆಗಳಲ್ಲಿ ತಲಾ ಒಂದು ಕೋವಿಡ್-19 ಸೋಂಕು ಪ್ರಕರಣ ದೃಢವಾಗಿದೆ.

ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 5213ಕ್ಕೆ ಏರಿಕೆಯಾಗಿದೆ. ಇಂದು ಒಟ್ಟು 280 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 1968 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 3184 ಸಕ್ರೀಯ ಪ್ರಕರಣಗಳಿದ್ದು, 59ಜನರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದಾರೆ. ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next