Advertisement

ಗದಗ: ವಲಸೆ ಕಾರ್ಮಿರಿಂದಲೇ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಕೋವಿಡ್-19

03:09 PM May 21, 2020 | keerthan |

ಗದಗ: ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ ಎರಡು ಕೋವಿಡ್-19 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 14ಕ್ಕೆ ಏರಿಕೆಯಾಗಿವೆ. ಇಷ್ಟು ದಿನ ನಗರಕ್ಕೆ ಸೀಮಿತವಾಗಿದ್ದ ಕೋವಿಡ್-19, ಜಿಲ್ಲೆಯ ಗ್ರಾಮೀಣ ಪ್ರದೇಶಕ್ಕೂ ವ್ಯಾಪಿಸುತ್ತಿದೆ. ವಲಸಿಗರಿಂದಾಗಿ ದಿನ ಕಳೆದಂತೆ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರುಮುಖವಾಗಿವೆ.

Advertisement

ಮಹಾರಾಷ್ಟ್ರದ ಮುಂಬೈ ಪ್ರಯಾಣ ಮಾಡಿರುವ 32 ವರ್ಷದ ವ್ಯಕ್ತಿ(ಪಿ.1566), ಛತ್ತೀಸಘಡ್‌ದಿಂದ ಆಗಮಿಸಿರುವ 28 ವರ್ಷ ವ್ಯಕ್ತಿ(ಪಿ.1567) ಗೆ ಸೋಂಕು ದೃಢ ಪಟ್ಟಿದೆ. ಲಾಕ್‌ಡೌನ್ ಸಡಿಲಿಕೆಯಾಗಿದ್ದರಿಂದ ಹೊರ ರಾಜ್ಯದಿಂದ ತವರು ಜಿಲ್ಲೆಗೆ ಆಗಮಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅವರನ್ನು ಕೋವಿಡ್ ಸೋಂಕು ಪತ್ತೆಗಾಗಿ ಪರೀಕ್ಷೆಗೊಳಪಡಿಸಿದ್ದರಿಂದ ಪಾಸಿಟಿವ್ ಪ್ರಕರಣಗಳು ಕಂಡು ಬಂದಿವೆ ಎಂದು ಹೇಳಲಾಗಿದೆ.

ಗುರುವಾರ ದೃಢಪಟ್ಟಿರುವ ಎರಡು ಸೇರಿದಂತೆ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14ಕ್ಕೆ ಹೆಚ್ಚಳವಾಗಿದೆ. ಸೋಂಕಿತರನ್ನು ಇಲ್ಲಿನ ನಿಗದಿತ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಸಕ್ರಿಯ 14 ಸೇರಿದಂತೆ ಒಟ್ಟು 20 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ ಜಿಲ್ಲೆಯ ಮೊದಲ ಪ್ರಕರಣ ಪಿ.166 ಕಾರ್ಡಿಕ್ ಅರೆಸ್ಟ್‌ನಿಂದ ಮೃತಪಟ್ಟಿದ್ದು, ಐವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಅದರಲ್ಲೂ ಇತ್ತೀಚೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಲಾಕ್‌ಡೌನ್‌ ನಿಂದ ಸಡಿಲಿಕೆ ನೀಡಿದ್ದರಿಂದ ಬೇರೆ ರಾಜ್ಯಗಳಿಗೆ ವಲಸೆ ಹೋಗಿದ್ದ ಕಾರ್ಮಿಕರು ಇದೀಗ ತವರಿನತ್ತ ಮುಖಮಾಡುತ್ತಿದ್ದು, ಕೋವಿಡ್-19 ಸೋಂಕಿನ ಸಂಖ್ಯೆ ಗಗನ ಮುಖಿಯಾಗಿದ್ದು, ಜಿಲ್ಲೆಯ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next