ಉಡುಪಿ: ಕೋವಿಡ್-19 ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಮತ್ತಷ್ಟು ಹೆಚ್ಚುತ್ತಿದೆ. ಇಂದು ಮತ್ತೆ 10 ಜನರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢಪಟ್ಟಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 187ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಅನ್ಯ ರಾಜ್ಯದ ಪ್ರಯಾಣಿಕರಿಂದ ಹೆಚ್ಚಿನ ಸೋಂಕು ಪ್ರಕರಣ ಪತ್ತೆಯಾಗುತ್ತಿದೆ. ಅದರಲ್ಲೂ ಮಹಾರಾಷ್ಟ್ರದಿಂದ ಬಂದಿರುವ ಪ್ರಯಾಣಿಕರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ದೃಢವಾಗುತ್ತಿದೆ.
ಜಿಲ್ಲೆಯಲ್ಲಿ ಓರ್ವ 31 ವರ್ಷದ ವ್ಯಕ್ತಿ ಕತಾರ್ ನಿಂದ ಬಂದ ಪ್ರಯಾಣಿಕನಾಗಿದ್ದರೆ, ಉಳಿದೆಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಇವರಲ್ಲಿ ಕೆಲವರು ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದರು. ಸದ್ಯ ಅವರ ವೈದ್ಯಕೀಯ ವರದಿ ಕೈಸೇರತ್ತಿದ್ದಂತೆ ಜಿಲ್ಲಾಡಳಿತ ಅವರನ್ನು ನಿಗಧಿತ ಆಸ್ಪತ್ರೆಗೆ ಸೇರಿಸಲಾಗಿದೆ.
ಜಿಲ್ಲೆಯಲ್ಲಿ ಶನಿವಾರ ಒಟ್ಟು 13 ಪ್ರಕರಣಗಳು ದೃಢವಾಗಿತ್ತು. ಇವರೆಲ್ಲರನ್ನೂ ನಿಗಧಿತ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಸಂಜೆಯ ತನಕ ಜಿಲ್ಲೆಯ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 177ಕ್ಕೆ ಏರಿಕೆಯಾಗಿತ್ತು. ಇಂದಿನ ಹೊಸ 10 ಪ್ರಕರಣಗಳ ಕಾರಣದಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 187ಕ್ಕೆ ಏರಿಕೆ ಕಂಡಿದೆ.
ಜಿಲ್ಲೆಯಲ್ಲಿ ಶನಿವಾರ ಗುಣಮಖರಾದ 45 ಮಂದಿ ಸೋಂಕಿತರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. 17 ಮಕ್ಕಳು, ನಾಲ್ವರು ಪೊಲೀಸರು ಸೇರಿ 45 ಜನರನ್ನು ಬಿಡುಗಡೆ ಮಾಡಲಾಗಿದೆ.