Advertisement

ವಿಮ್ಸ್ ನ 21 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆ

04:54 PM Mar 23, 2021 | Team Udayavani |

ಬಳ್ಳಾರಿ : ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮತ್ತೊಮ್ಮೆ ಕೋವಿಡ್ ಸೋಂಕು ಅಟ್ಟಹಾಸ ಮೆರೆದಿದೆ. ನಗರದ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ 21 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಜಿಲ್ಲೆಯ ಜನರನ್ನು ಆತಂಕಕ್ಕೀಡುಮಾಡಿದೆ.

Advertisement

ವೈದ್ಯಕೀಯ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಇದ್ದ ಕಾರಣ ಪ್ರಥಮ ವರ್ಷದ ವಿದ್ಯಾರ್ಥಿಗಳು ತಮ್ಮ ತಮ್ಮ ಊರುಗಳಿಗೆ ತೆರಳಿದ್ದರು. ವಾಪಸ್ ಬಂದ ಬಳಿಕ ಕೆಲವರಲ್ಲಿ ಜ್ವರ, ನೆಗಡಿ ಕಾಣಿಸಿಕೊಂಡಿದೆ. ಇದರಿಂದ 100 ಜನ ವಿದ್ಯಾರ್ಥಿಗಳನ್ನು ಕೋವಿಡ್ ತಪಾಸಣೆಗೆ ಒಳಪಡಿಸಿದಾಗ ಈ ಪೈಕಿ ಸೋಮವಾರ 13 ಜನರಲ್ಲಿ ಸೋಂಕು ದೃಢಪಟ್ಟಿದೆ.

ಸೋಂಕಿತರ ಸಂಪರ್ಕ ಹೊಂದಿದ್ದ 88 ಜನರನ್ನು ತಪಾಸಣೆಗೆ ಒಳಪಡಿಸಿದಾಗ ಅವರಲ್ಲಿ 8 ಜನರಲ್ಲಿ ಸೋಂಕು ಆವರಿಸಿರುವುದು ಪತ್ತೆಯಾಗಿದೆ. ವೈದ್ಯಕೀಯ 19, ದಂತ ವೈದ್ಯಕೀಯ 2 ವಿದ್ಯಾರ್ಥಿಗಳು ಸೇರಿ ಒಟ್ಟು 21 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ ಎಂದು ವಿಮ್ಸ್ ನಿರ್ದೇಶಕ ಡಾ. ಗಂಗಾಧರಗೌಡ ಸ್ಪಷ್ಟಪಡಿಸಿದ್ದಾರೆ.

ಕೋವಿಡ್ ದೃಢಪಟ್ಟಿರುವ 21 ವಿದ್ಯಾರ್ಥಿಗಳು ಆರೋಗ್ಯವಾಗಿದ್ದು, ಗಂಭೀರ ಪರಿಸ್ಥಿತಿಯಿಲ್ಲ. ಎಲ್ಲರನ್ನೂ ಟ್ರೋಮಾಕೇರ್ ಸೆಂಟರ್‌ನ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next