Advertisement

ಮೂವರು ಮಹಿಳೆಯರಲ್ಲಿ ಕೋವಿಡ್ ಸೋಂಕು ದೃಢ

07:52 AM Jun 06, 2020 | Suhan S |

ಧಾರವಾಡ: ಜಿಲ್ಲೆಯಲ್ಲಿ ಶುಕ್ರವಾರ ಮೂರು ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿವೆ. 53 ವರ್ಷ (ಪಿ-4530), 32 ವರ್ಷ (ಪಿ-4531) ಹಾಗೂ 54 ವರ್ಷದ (ಪಿ.4532) ಮೂವರು ಮಹಿಳೆಯರಲ್ಲಿ ಸೋಂಕು ದೃಢಪಟ್ಟಿದೆ.

Advertisement

ಮೇ 23ರಂದು ಸೋಂಕು ದೃಢಪಟ್ಟಿದ್ದ ಪಿ-1942, ಪಿ-1943, ಪಿ-1944 ಹಾಗೂ ಪಿ-1945 ಅವರೊಂದಿಗೆ ಸಂಪರ್ಕ ಹೊಂದಿದ್ದ ಕಾರಣಕ್ಕೆ ಈ ಮಹಿಳೆಯರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಒಂದೇ ಕುಟುಂಬದ ಈ ಮೂವರು ಮಹಿಳೆಯರಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಕಿಮ್ಸ್‌ಗೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ 54ಕ್ಕೆ ಏರಿಕೆಯಾಗಿದ್ದು, ಈಗಾಗಲೇ 30 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಉಳಿದವರಿಗೆ ಹುಬ್ಬಳ್ಳಿಯ ಕಿಮ್ಸ್‌ ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಡಿಸಿ ದೀಪಾ ಚೋಳನ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next