ಡಾ| ರಾಗಪ್ರಿಯಾ ಆರ್. ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಕೋವಿಡ್-19 ಟಾಸ್ಕ್ ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Advertisement
ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುವ ಪ್ರಯಾಣಿಕರು, ಸಾರ್ವಜನಿಕರು ಆಗಮಿಸುವವರಿಂದ ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವುದು ಮತ್ತು ಕೋವಿಡ್2ನೇ ಅಲೆಯ ಮುಂಜಾಗ್ರತ ಕ್ರಮ ಕೈಗೊಳ್ಳುವುದು ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಸೂಚನೆಗಳನ್ನು ನೀಡಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ
ಪಾಲಿಸಿ, ಕೋವಿಡ್-19 ಹರಡುವಿಕೆ ತಡೆಗಟ್ಟುವಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಹೇಳಿದರು.
ಕಂಡುಬಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗದ ಶಹಾಪುರ ತಾಲೂಕಿನ ಮುಡಬೂಳ, ಗುರುಮಠಕಲ್, ಯಾದಗಿರಿ ತಾಲೂಕಿನ ಯರಗೋಳ ಗ್ರಾಮಗಳಲ್ಲಿ
ಸ್ಥಾಪಿಸಲಾದ ಚೆಕ್‌ಪೋಸ್ಟ್‌ಗಳಲ್ಲಿ ಮಹಾರಾಷ್ಟ್ರ ರಾಜ್ಯದಿಂದ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಳ ಮುಂಚೆ ಪಡೆಯಲಾದ ಆರ್‌ಟಿಪಿಸಿಆರ್
ನೆಗೆಟಿವ್ ವರದಿ ತೋರಿಸಬೇಕು ಎಂದು ತಿಳಿಸಿದರು. ಮಹಾರಾಷ್ಟ್ರ ರಾಜ್ಯದಿಂದ ಬಸ್, ರೈಲು, ಖಾಸಗಿ ವಾಹನಗಳ ಮೂಲಕ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಳ ಮೊದಲು ಮಾಡಿದ ಆರ್‌ಟಿಪಿಸಿಆರ್ ಪರೀಕ್ಷೆ ನೆಗೆಟಿವ್ ವರದಿಯೊಂದಿಗೆ ಆಗಮಿಸತಕ್ಕದ್ದು. ಆರ್‌ಟಿಪಿಸಿಆರ್ ಪರೀಕ್ಷೆ ನೆಗೆಟಿವ್ ವರದಿ ಇಲ್ಲದೇ ಜಿಲ್ಲೆಗೆ ಆಗಮಿಸಿದ ವ್ಯಕ್ತಿಗಳ ಆರ್ ಟಿಪಿಸಿಆರ್ ನೆಗೆಟಿವ್ ಫಲಿತಾಂಶ ಬರುವವರೆಗೂ ಕಡ್ಡಾಯವಾಗಿ ಕ್ವಾರಂಟೈನ್ ಕೊಠಡಿಯಲ್ಲಿ ಇರಿಸಬೇಕು ಎಂದು ಸೂಚಿಸಿದರು. ಆರ್‌ಟಿಪಿಸಿಆರ್ ನೆಗೆಟಿವ್
ವರದಿಯೊಂದಿಗೆ ಪ್ರಯಾಣಿಸುವ ಬಗ್ಗೆ ಬಸ್‌ಗಳ ನಿರ್ವಾಹಕರು ಖಚಿತಪಡಿಸಿಕೊಂಡು ಪ್ರಯಾಣಿಸಲು ಅನುಮತಿ ನೀಡಬೇಕೆಂದರು.
Related Articles
ಮಾಡಿ ಕೊರೊನಾದಿಂದ ಜಾಗೃತಿ ವಹಿಸಬೇಕೆಂದರು. ಜಿಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಾಗವಾನ್ ಸೋನಾವಣೆ,
ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಇಂದುಮತಿ ಕಾಮಶೆಟ್ಟಿ, ಡಾ| ಅನ್ವರ್,
ಡಾ| ಲಕ್ಷ್ಮೀಕಾಂತ್ ಸೇರಿದಂತೆ ಇತರರು ಸಭೆಯಲ್ಲಿದ್ದರು.
Advertisement