Advertisement

ಕೋವಿಡ್ ಭಯ ಅನಗತ್ಯ: ಸಿದ್ದೇಶ್ವರ್‌

10:51 AM Jun 30, 2020 | mahesh |

ಹೊನ್ನಾಳಿ: ಕೋವಿಡ್ ನಿಂದ ಆರ್ಥಿಕ ಸಂಕಷ್ಟ ಉಂಟಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಕಷ್ಟಕ್ಕೊಳಗಾಗಿರುವ ಜನರಿಗೆ 20 ಲಕ್ಷ ಕೋಟಿ ರೂ.ಗಳ ಅನುದಾನದ
ಪ್ಯಾಕೇಜ್‌ ನೀಡಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ಹೇಳಿದರು. ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ ಸೋಮವಾರ ಅಂಗನವಾಡಿ ಕಟ್ಟಡ, ವಾಣಿಜ್ಯ ಕಟ್ಟಡ ಮೇಲಂತಸ್ತು ಮಳಿಗೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಕೋವಿಡ್ ಮಹಾಮಾರಿ ಬಗ್ಗೆ ಭಯ ಬೇಡ. ಕೋವಿಡ್ ರೋಗದ ಲಕ್ಷಣಗಳು ಕಂಡ ತಕ್ಷಣ ಪರೀಕ್ಷಿಸಿಕೊಂಡು ಚಿಕಿತ್ಸೆ ಪಡೆದುಕೊಂಡರೆ ಗುಣಮುಖರಾಗುವುದು ಗ್ಯಾರಂಟಿ. ಈ
ರೋಗದ ಬಗ್ಗೆ ತಾತ್ಸಾರ ಸಲ್ಲದು. ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ನಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಬೇಕು. ಕೋವಿಡ್ ಆದಷ್ಟು ಬೇಗ ತೊಲಗಲಿ ಎಂದು ಭಗವಂತನಲ್ಲಿ ಎಲ್ಲರೂ ಪ್ರಾರ್ಥಿಸೋಣ ಎಂದರು.

ಸಿಎಂ ರಾಜಕೀಯ ಕಾರ್ಯದರ್ಶಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ಸುರಹೊನ್ನೆ ಗ್ರಾಮದಲ್ಲಿ ಸಿಸಿ ರಸ್ತೆ, ವಾಣಿಜ್ಯ ಮಳಿಗೆಗಳ ಸಂಕೀರ್ಣ, ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು 95 ಲಕ್ಷ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ. ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳ ಅಭಿವೃದ್ಧಿಗೆ ನಾನು ಬದ್ಧ. ಮುಂದಿನ ಮೂರು ವರ್ಷಗಳಲ್ಲಿ ಈ ಎರಡು ತಾಲೂಕುಗಳನ್ನು ಮಾದರಿ ತಾಲೂಕನ್ನಾಗಿಸುವುದಾಗಿ ತಿಳಿಸಿದರು.

ಜಿಪಂ ಅಧ್ಯಕ್ಷೆ ದೀಪಾ ಜಗದೀಶ್‌, ಮಾಜಿ ಶಾಸಕ ಡಿ.ಜಿ. ಶಾಂತನಗೌಡ, ಗ್ರಾಪಂ ಉಪಾಧ್ಯಕ್ಷ ಎಸ್‌. ಸದಾಶಿವಪ್ಪ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಹಿರಿಯಮ್ಮ ವಿಜಯ್‌
ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯರಾದ ಉಮಾ ರಮೇಶ್‌, ಎಂ.ಆರ್‌. ಮಹೇಶ್‌, ತಾಪಂ ಸದಸ್ಯರಾದ ಎಸ್‌.ಪಿ. ರವಿಕುಮಾರ್‌, ಸಿದ್ದಲಿಂಗಪ್ಪ, ತಾಪಂ ಪ್ರಭಾರಿ ಇಒ ಎಚ್‌. ವಿ. ರಾಘವೇಂದ್ರ, ಗ್ರಾಪಂ ಸದಸ್ಯರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next