ನವದೆಹಲಿ: ಕೊವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಮತ್ತು ಎರಡನೇ ಡೋಸ್ ನಡುವಿನ ಅಂತರವು ಸದ್ಯದಲ್ಲೇ 8 ರಿಂದ 16 ವಾರಗಳಿಗೆ ಇಳಿಯಲಿದೆ.
ಲಸಿಕೆಗೆ ಸಂಬಂಧಿಸಿದ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ(ಎನ್‌ಟಿಎಜಿಐ) ಈ ಕುರಿತು ಶಿಫಾರಸು ಮಾಡಿದೆ.
ಪ್ರಸ್ತುತ ಕೊವಿಶೀಲ್ಡ್‌ನ ಮೊದಲ ಡೋಸ್ ಪಡೆದವರಿಗೆ 12-16 ವಾರಗಳ ಬಳಿಕವೇ ಎರಡನೇ ಡೋಸ್ ನೀಡಲಾಗುತ್ತಿದೆ.
ಎರಡನೇ ಡೋಸ್ ಅನ್ನು 8-16 ವಾರಗಳಲ್ಲಿ ನೀಡಿದರೂ, 12-16 ವಾರಗಳ ಬಳಿಕ ಉತ್ಪತ್ತಿಯಾಗುವಷ್ಟೇ ಪ್ರತಿಕಾಯ ಉತ್ಪತ್ತಿಯಾಗುತ್ತದೆ ಎನ್ನುವುದನ್ನು ಇತ್ತೀಚೆಗಿನ ಹಲವು ಜಾಗತಿಕ ವೈಜ್ಞಾನಿಕ ಪುರಾವೆಗಳು ಸ್ಪಷ್ಟಪಡಿಸಿವೆ.
ಈ ಹಿನ್ನೆಲೆಯಲ್ಲಿ ಅಂತರವನ್ನು ಇಳಿಸುವ ನಿರ್ಧಾರಕ್ಕೆ ಬರಲಾಯಿತು ಎಂದು ಸಮಿತಿ ಹೇಳಿದೆ.
ಭಾರತ್ ಬಯೋಟೆಕ್ ಕಂಪನಿಯ ಕೊವ್ಯಾಕ್ಸಿನ್ ಲಸಿಕೆಯನ್ನು ಮೊದಲ ಡೋಸ್ ನೀಡಿದ 28 ದಿನಗಳಲ್ಲಿ ಎರಡನೇ ಡೋಸ್ ನೀಡಲಾಗುತ್ತದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ.