ಹುಮನಾಬಾದ: ತಾಲೂಕಿನ ಘಾಟಬೋರಳ ಗ್ರಾಮದ ಅಂಬೇಡ್ಕರ್ ವೃತದಲ್ಲಿರುವ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎಸೆದ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
Advertisement
ಅಂಬೇಡ್ಕರ್ ಭಾವಚಿತ್ರಕ್ಕೆ ಅಪರಿಚಿತ ಕಿಡಿಗೇಡಿಗಳು ಸಗಣಿ ಬಡಿದ ವಿಷಯ ತಿಳಿಯುತ್ತಿದ್ದಂತೆ ನೂರಾರು ಜನರು ವೃತ್ತದಲ್ಲಿ ಜಮಾಯಿಸಿದ್ದರು.
ಘಟನೆಯ ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಬಿಗಿ ಪೊಲೀಸ್ ಬಂದೋಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ. ತಹಶೀಲ್ದಾರ್ ಕೂಡಾ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.