Advertisement

Nuh violence: ನುಹ್ ಹಿಂಸಾಚಾರದ ಮಾಸ್ಟರ್ ಮೈಂಡ್ ಬಿಟ್ಟು ಬಜರಂಗಿ ಅರೆಸ್ಟ್…

12:48 PM Aug 16, 2023 | Team Udayavani |

ಹರ್ಯಾಣ: ಕಳೆದ ಎರಡು ವಾರಗಳ ಹಿಂದೆ ನುಹ್ ಪ್ರದೇಶದಲ್ಲಿ ನಡೆದ ಹಿಂಸಾಚಾರ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ಬಿಟ್ಟು ಬಜರಂಗಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ಮಂಗಳವಾರ ಬಂಧಿಸಲಾದ ಸ್ವಯಂ ಘೋಷಿತ ಗೋರಕ್ಷಕ ಬಿಟ್ಟು ಬಜರಂಗಿ ಅವರು ಹಿಂಸಾಚಾರ ಪೀಡಿತ ನುಹ್‌ನಲ್ಲಿ ಧಾರ್ಮಿಕ ಮೆರವಣಿಗೆಯಲ್ಲಿ ಭಾಗವಹಿಸಿದ್ದ ವೇಳೆ ಕತ್ತಿ, ತ್ರಿಶೂಲಗಳನ್ನು ಹೊತ್ತೊಯ್ಯುತ್ತಿದ್ದರು ಈ ವೇಳೆ ಮೆರವಣಿಗೆ ಸ್ಥಳದಲ್ಲಿದ್ದ ಪೊಲೀಸರು ಮೆರವಣಿಗೆ ವೇಳೆ ಶಸ್ತ್ರಾಸ್ತ್ರಗಳನ್ನು ಬಳಸಬೇಡಿ ಎಂದು ಮೆರವಣಿಗೆ ನಡೆಸುತಿದ್ದವರ ಕೈಯಲ್ಲಿದ್ದ ಕತ್ತಿ ಹಾಗೂ ಇತರ ಆಯುಧಗಳನ್ನು ವಶಕ್ಕೆ ಪಡೆದಿದ್ದರು ಈ ವೇಳೆ ತಮ್ಮ ಆಕ್ರೋಶ ಹೊರ ಹಾಕಿದ ಭಜರಂಗಿ ಹಾಗೂ ಇತರರು ಜೋರಾಗಿ ಘೋಷಣೆಗಳನ್ನು ಕೂಗುತ್ತಾ ಪೊಲೀಸರ ಮೇಲೆ ಹಲ್ಲೆ ನಡೆಸಿ ಅವರ ಕೈಯಲ್ಲಿದ್ದ ಶಸ್ತ್ರಾಸ್ತ್ರಗಳನ್ನು ಕಿತ್ತುಕೊಂಡು ಅಲ್ಲಿಂದ ಪರಾರಿಯಾಗಿದ್ದರು.

ಹಿಂಸಾಚಾರಕ್ಕೆ ಸಂಬಂಧಿಸಿ ಪೊಲೀಸರು ಹಲವರ ಮೇಲೆ ಪ್ರಕರಣ ದಾಖಲಿಸಿದ್ದು ಮಂಗಳವಾರ ಹಿಂಸಾಚಾರದ ಮಾಸ್ಟರ್ ಮೈಂಡ್ ಆಗಿರುವ ಬಿಟ್ಟು ಭಜರಂಗಿಯನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳಲು ಆತನ ಮನೆಯ ಬಳಿ ತೆರಳಿದ್ದಾರೆ. ಮನೆಯಲ್ಲಿದ್ದ ಭಜರಂಗಿ ಪೊಲೀಸರನ್ನು ಕಂಡೊಡನೆ ಮನೆಯಿಂದ ಹೊರಬಂದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಕೂಡಲೇ ಪೊಲೀಸರು ಆತನನ್ನು ಬೆನ್ನಟ್ಟಿ ಹಿಡಿದು ಠಾಣೆಗೆ ಕರೆತಂದಿದ್ದಾರೆ.

ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಉಷಾ ಕುಂದು ನೀಡಿದ ದೂರಿನ ಆಧಾರದ ಮೇಲೆ ನುಹ್‌ನ ಸದರ್ ಪೊಲೀಸ್ ಠಾಣೆಯಲ್ಲಿ ಹೊಸದಾಗಿ ಎಫ್‌ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ ಬಿಟ್ಟು ಬಜರಂಗಿ ಅಲಿಯಾಸ್ ರಾಜ್‌ಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಪೊಲೀಸರ ಕಾರ್ಯಾಚರಣೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಿವಿಲ್ ವಸ್ತ್ರದಲ್ಲಿದ್ದ ಹತ್ತಕ್ಕೂ ಹೆಚ್ಚು ಪೊಲೀಸರು ಭಜರಂಗಿಯನ್ನು ಬೆನ್ನಟ್ಟಿ ವಶಕ್ಕೆ ಪಡೆಯುವ ವಿಡಿಯೋ ವೈರಲ್ ಆಗಿದೆ.

Advertisement

ಬಿಟ್ಟು ಬಜರಂಗಿ ಮತ್ತು ಅವರ ಬೆಂಬಲಿಗರ ವಿರುದ್ಧ ಸೆಕ್ಷನ್ 148 (ಗಲಭೆ, ಮಾರಣಾಂತಿಕ ಆಯುಧಗಳಿಂದ ಶಸ್ತ್ರಸಜ್ಜಿತರಾಗಿರುವುದು), 149 (ಕಾನೂನುಬಾಹಿರ ಸಭೆ), 186 (ಕರ್ತವ್ಯ ನಿರ್ವಹಣೆಯಲ್ಲಿ ಸ್ವಯಂಪ್ರೇರಣೆಯಿಂದ ಯಾವುದೇ ಸಾರ್ವಜನಿಕ ನೌಕರನನ್ನು ತಡೆಯುವುದು), 332 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಅಡಿಯಲ್ಲಿ ದೂರು ದಾಖಲಿಸಲಾಗಿದೆ. 395 (ದರೋಡೆ), 397 (ಹಲ್ಲೆಗೆ ಯತ್ನ), 506 (ಅಪರಾಧ ಬೆದರಿಕೆ) ದಂಡ ಸಂಹಿತೆ (IPC) ಮತ್ತು ಶಸ್ತ್ರಾಸ್ತ್ರ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Misbehaving: ಮದ್ಯ ಸೇವಿಸಿ ದೇವರಮನೆ ಗುಡ್ಡ ಪ್ರವಾಸಿ ತಾಣದ ಬಳಿ ಮೋಜು ಮಸ್ತಿ…

Advertisement

Udayavani is now on Telegram. Click here to join our channel and stay updated with the latest news.

Next