Advertisement

BJP ಜೊತೆ JDS ಮೈತ್ರಿ ಮಾಡಿಕೊಳ್ಳುತ್ತಾ? ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದೇನು?

05:37 PM Jun 23, 2023 | Team Udayavani |

ರಾಮನಗರ: ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಾ ಈ ವಿಚಾರದ ಬಗ್ಗೆ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿಕೆಯೊಂದನ್ನು ನೀಡಿದ್ದಾರೆ.

Advertisement

ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸಂಸದರನ್ನ ಗೆಲ್ಲಿಸಬೇಕು ಎಂಬ ಲೆಕ್ಕಾಚಾರ ಹಾಕಿಕೊಂಡಿದ್ದೇವೆ, ಆದರೆ ಅಭ್ಯರ್ಥಿ ಆಯ್ಕೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು, ಒಂದು ವೇಳೆ ಹೈಕಮಾಂಡ್ ಸ್ಪರ್ಧೆ ಮಾಡು ಅಂದರೆ ಮಾಡ್ತೀನಿ ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ಅವರು ಒಂದಷ್ಟು ರಾಜಕೀಯ ಬದಲಾವಣೆ ಆಗಬೇಕು ಮುಂದೆ ಒಂದಷ್ಟು ಬದಲಾವಣೆ ಜೊತೆಗೆ ಚುನಾವಣೆ ಎದುರಿಸುತ್ತೇವೆ .

ಜೆಡಿಎಸ್ ಜೊತೆಗೆ ಮೈತ್ರಿ ಆಗಬಹುದು:
ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಾ ಎಂಬ ವಿಚಾರದ ಬಗ್ಗೆ ಮಾತನಾಡಿದ ಯೋಗೇಶ್ವರ್ ಮೈತ್ರಿ ಆಗಬಹುದು ಅಂದುಕೊಂಡಿದ್ದೇನೆ ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ, ಈಗಾಗಲೇ ಎಲ್ಲಾ ಕಡೆ ಮಾಧ್ಯಮಗಳಲ್ಲೂ ಈ ಬಗ್ಗೆ ಚರ್ಚೆ ಆಗ್ತಿದೆ ಹಾಗಾಗಿ ಹೊಂದಾಣಿಕೆ ಆಗಬಹುದು ಅಂತ ಅನ್ನಿಸುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Fail ಆಗಿದ್ದೇವೆ, ಈಗ ಸಪ್ಲಿಮೆಂಟರಿಗೆ ಫುಲ್ ಪ್ರಿಪೇರ್ ಆಗುತ್ತಿದ್ದೇವೆ: ಡಿ.ವಿ.ಸದಾನಂದ ಗೌಡ

Advertisement
Advertisement

Udayavani is now on Telegram. Click here to join our channel and stay updated with the latest news.

Next