ಕಾಪು: ಕೇರಳ ಮತ್ತು ಗೋವಾ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ತೀರಾ ನಿರ್ಲಕ್ಷ ಕ್ಕೊಳಗಾಗಿದೆ. ಕರಾವಳಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಟೂರಿಸಂ ಪಾಲಿಸಿ 2025ರಂತೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದ್ದು ಪ್ರವಾಸೋದ್ಯಮಕ್ಕೆ ಪೂರಕವಾಗಿ ಬಂಡವಾಳ ಹೂಡಿಕೆಯೊಂದಿಗೆ ಉದ್ಯಮಿಗಳಿಂದ ಬಂಡವಾಳ ಸೆಳೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದರು.
ಕಾಪು ಬೀಚ್ ಮತ್ತು ಲೈಟ್ ಹೌಸ್ ಪ್ರದೇಶಕ್ಕೆ ಭೇಟಿ ನೀಡಿದ ಅವರು, ಪ್ರವಾಸೋದ್ಯಮ ಆಭಿವೃದ್ಧಿ ಕುರಿತಾಗಿ ಪರಿಶೀಲನೆ ನಡೆಸಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಕರಾವಳಿ ಜಿಲ್ಲೆಯಲ್ಲಿ 300 ಕೀ. ಮೀ. ಗಿಂತಲೂ ವಿಸ್ತಾರವಾದ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕರಾವಳಿ ಸೀಪ್ಲೇನ್ ಯೋಜನೆ ಅನುಷ್ಠಾನಕ್ಕೆ ಯೋಜನೆ ರೂಪಿಸಲಾಗಿದೆ. ಗೋವಾ ದಿಂದ ಲಕ್ಷ ದ್ವೀಪದವರೆಗೆ ಸಂಪರ್ಕ ಜೋಡಿಸುವ ಈ ಯೋಜನೆಯ ಬಗ್ಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರೊಂದಿಗೆ ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿಗರನ್ನು ಸೆಳೆಯಲು ಸ್ಪೀಡ್ ಬೋಟ್‌ಗಳ ಅಳವಡಿಕೆ, ಯಾಚ್ ಮಾದರಿಯ ವ್ಯವಸ್ಥೆ, ಹೆಲ್ತ್ ಟೂರಿಸಂ ಜೋಡಣೆ ಸಹಿತ ಟೂರಿಸಂ ಪಾಲಿಸಿ 2025ರಂತೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದೆ ಎಂದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಮನವಿಯ ಮೇರೆಗೆ ಬ್ರಿಟೀಷರ ಕಾಲದ ಲೈಟ್ ಹೌಸ್ ಪ್ರದೇಶ ಮತ್ತು ಕಾಪು ಬೀಚ್‌ಗೆ ಭೇಟಿ ನೀಡಿದ್ದು ಅವರ ಮನವಿಯಂತೆ ಇಲ್ಲಿನ ಮೂಲಭೂತ ಸೌಕರ್ಯಗಳ ಕೊರತೆಯನ್ನು ನೀಗಿಸಲು ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು. ವಾಕಿಂಗ್ ಟ್ರ್ಯಾಕ್‌ನಿಂದ ಲೈಟ್‌ಹೌಸ್‌ವರೆಗೆ ನೇರ ಸಂಪರ್ಕ ವ್ಯವಸ್ಥೆ, ಎರಡು ಬಂಡೆಗಳ ನಡುವೆ ಗ್ಲಾಸ್ ಬ್ರಿಡ್ಜ್ ಮತ್ತು ತೂಗು ಸೇತುವೆ ರಚನೆ, ಪಾರ್ಕಿಂಗ್ ಸೌಲಭ್ಯ ಸಹಿತ ವಿವಿಧ ಮೂಲಭೂತ ಸೌಕರ್ಯಗಳ ಜೋಡಣೆಗೆ ಒತ್ತು ನೀಡಲಾಗುವುದು. ಈ ಬಗ್ಗೆ ತುರ್ತು ಮಾಸ್ಟರ್ ಪ್ಲಾ ನ್ ಸಿದ್ಧಪಡಿಸುವಂತೆ ಪ್ರವಾಸೋದ್ಯಮ ಇಲಾಖೆ ಮತ್ತು ಜಿಲ್ಲಾಽಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.
ಇದನ್ನೂ ಓದಿ:ತೈಲ ದರ ಹೆಚ್ಚಾದರೂ ಚಿಂತೆಯಿಲ್ಲ ಎನ್ನುವವರಿಗೆ ಲೀಟರಿಗೆ 1ಸಾವಿರ ದರ ವಿಧಿಸಿ :ಯು.ಟಿ. ಖಾದರ್
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್ ಬಿ.ಕೆ., ಕೃಷಿ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್, ಪುರಸಭೆ ನಾಮ ನಿರ್ದೇಶಿತ ಸದಸ್ಯ ನವೀನ್ ಅಮೀನ್, ಆನಂದ್ ಶ್ರೀಯಾನ್ ಮೊದಲಾದವರು ಉಪಸ್ಥಿತರಿದ್ದರು.