Advertisement

ಸಿಜೆಐ ವಿರುದ್ಧ ಸಿಪಿಎಂ ಮಹಾಭಿಯೋಗ?

06:20 AM Jan 24, 2018 | Team Udayavani |

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರ ವಿರುದ್ಧ ಮಹಾಭಿಯೋಗ ನಡೆಸಲು ಸಿಪಿಎಂ ಸಿದ್ಧತೆ ನಡೆಸಿದೆ. ಸುಪ್ರೀಂ ಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳು ಸುದ್ದಿಗೋಷ್ಠಿ ನಡೆಸಿ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

Advertisement

ನ್ಯಾಯಮೂರ್ತಿಗಳ ಆರೋಪಕ್ಕೆ ಸಂಬಂಧಿಸಿ ಮುಂದಿನ ಬಜೆಟ್‌ ಅಧಿವೇಶನದಲ್ಲಿ ಸಿಜೆಐ ಮಿಶ್ರಾ ವಿರುದ್ಧ ಮಹಾಭಿಯೋಗ ನಡೆಸುವ ಕುರಿತು ಸಿಪಿಎಂ ಇತರೆ ಪಕ್ಷಗಳೊಂದಿಗೆ ಚರ್ಚೆ ನಡೆಸುತ್ತಿದೆ. ಮಂಗಳವಾರ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಎನ್‌ಸಿಪಿ ನಾಯಕ ತಾರಿಕ್‌ ಅನ್ವರ್‌ ಹಾಗೂ ಜೆಡಿಯು ಬಂಡಾಯ ನಾಯಕ ಶರದ್‌ ಯಾದವ್‌ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಸುಪ್ರೀಂ ನ್ಯಾಯಮೂರ್ತಿಗಳು ಎತ್ತಿರುವ ವಿಚಾರಗಳನ್ನು ಪರಿಹರಿಸಲು ಸರ್ವೋಚ್ಚ ನ್ಯಾಯಾಲಯ ಮುಂದಾಗಿಲ್ಲ. ಹಾಗಾಗಿ, ಶಾಸಕಾಂಗ ಮತ್ತು ಕಾರ್ಯಾಂಗವೇ ಸಮಸ್ಯೆ ಬಗೆಹರಿಸಬೇಕಿದೆ ಎಂದು ಯೆಚೂರಿ ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next