Advertisement

ತೈಲ ಬೆಲೆ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ

11:17 AM Sep 09, 2018 | |

ಹುಣಸೂರು: ಒಳ್ಳೆಯ ದಿನಗಳು ಬರಲಿವೆ ಎಂದು ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫ‌ಲವಾಗಿದೆ. ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು,  ಸಾಮಾನ್ಯ ಜನತೆ ತತ್ತರಿಸಿದ್ದಾರೆ ಎಂದು ಸಿಪಿಎಂ ಕಾರ್ಯದರ್ಶಿ ಜಗದೀಶ್‌ ಸೂರ್ಯ ಕಿಡಿಕಾರಿದರು.

Advertisement

ತೈಲ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಶನಿವಾರ ಸಿಪಿಎಂ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ದಿನೇ ದಿನೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ.  ಆದರೂ ಕೂಡ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ರೈತರು, ಕಾರ್ಮಿಕರು ವಿರೋಧಿ ಧೋರಣೆಗಳನ್ನು ರೂಪಿಸಿ, ಜನರನ್ನು ಸಂಕಷ್ಟಕ್ಕೆ ದೂಡಿದೆ. ಸರ್ಕಾರ ಉದ್ಯಮಿಗಳ ಪರವಾಗಿದೆ. ಶೀಘ್ರ ಅಗತ್ಯ ಕ್ರಮ ಕೈಗೊಂಡು ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಇಳಿಸಬೇಕು ಎಂದು ಆಗ್ರಹಿಸಿದರು.

ಸಿಪಿಐ ಜಿಲ್ಲಾಸಮಿತಿ ಸದಸ್ಯ ವಿ.ಬಸವರಾಜು ಮಾತನಾಡಿ,  ಖಾಸಗಿ ಕಂಪನಿಗಳು ಲಾಭ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಯೋಜನೆಗಳನ್ನು ರೂಪಿಸಿದೆ. ನಾಲ್ಕೂವರೆ ವರ್ಷ ಕಳೆದರೂ ಬಡವರಿಗೆ ಯಾವುದೇ ಕಾರ್ಯಕ್ರಮ ಜಾರಿಗೊಳಿಸಿಲ್ಲ ಎಂದು ಕಿಡಿಕಾರಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಬೆಳೂ¤ರು ವೆಂಕಟೇಶ್‌, ಮಹೇಶ್‌ ಕುಮಾರ್‌, ಚಿಕ್ಕಣ್ಣೇಗೌಡ, ಅಶೋಕ್‌, ಜಗದೀಶ್‌, ಸಿದ್ದಯ್ಯ, ಸುಬ್ಬೇಗೌಡ, ದರ್ಶನ್‌, ಕಿರಣ್‌, ಮಂಜು ಇತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next