Advertisement

ಗವರ್ನರ್ ಜನರಲ್ ರಾಜಗೋಪಾಲಾಚಾರಿ ಮರಿ ಮೊಮ್ಮಗ ಕಾಂಗ್ರೆಸ್ ಗೆ ಗುಡ್ ಬೈ

08:29 PM Feb 23, 2023 | Team Udayavani |

ನವದೆಹಲಿ: ಭಾರತದ ಮೊದಲ ಗವರ್ನರ್ ಜನರಲ್ ಸಿ.ರಾಜಗೋಪಾಲಾಚಾರಿ ಅವರ ಮರಿ ಮೊಮ್ಮಗ ಸಿ.ಆರ್.ಕೇಶವನ್ ಅವರು ಗುರುವಾರ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರವನ್ನು ಬರೆದಿದ್ದು ಇದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

“ಎರಡು ದಶಕಗಳಿಂದ ಪಕ್ಷಕ್ಕೆ ಕೆಲಸ ಮಾಡುವ ಮೌಲ್ಯಯುತ ಕುರುಹುಗಳು ಸದ್ಯ ಕಾಣುತ್ತಿಲ್ಲ. “ಪಕ್ಷವು ಪ್ರಸ್ತುತವಾಗಿ ಏನನ್ನು ಸಂಕೇತಿಸುತ್ತದೆಯೋ ಅದನ್ನು ನಾನು ಒಪ್ಪಲು ಸಾಧ್ಯವಾಗುತ್ತಿಲ್ಲ, ನನ್ನ ಮುಂದಿನ ಭವಿಷ್ಯಕ್ಕಾಗಿ ಹೊಸ ಮಾರ್ಗವನ್ನು ಕಂಡುಕೊಳ್ಳುವ ಸಮಯ ಹತ್ತಿರ ಬಂದಿದೆ ಹಾಗಾಗಿ ನಾನು ಪಕ್ಷಕ್ಕೆ ರಾಜಿನಾಮೆಯನ್ನು ನೀಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:ದೆಹಲಿಯಲ್ಲಿ ‘ಬಾರಿಸು ಕನ್ನಡ ಡಿಂಡಿಮ’; ಉದ್ಘಾಟಿಸಲಿರುವ ಪ್ರಧಾನಿ ಮೋದಿ 

Advertisement

Udayavani is now on Telegram. Click here to join our channel and stay updated with the latest news.

Next