Advertisement

ಕಾಶ್ಮೀರದಲ್ಲಿ ನಿಷೇಧಿತ ಜಮಾತ್-ಎ-ಇಸ್ಲಾಮಿ ಸಂಘಟನೆಗೆ ಸೇರಿದ 90 ಕೋಟಿ ಮೌಲ್ಯದ ಆಸ್ತಿ ಜಪ್ತಿ

02:39 PM Nov 27, 2022 | Team Udayavani |

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಿಷೇಧಿತ ಇಸ್ಲಾಮಿ ಗುಂಪು ಜಮಾತ್-ಎ-ಇಸ್ಲಾಮಿ ಸಂಘಟನೆಗೆ ಸೇರಿದ ಸುಮಾರು 90 ಕೋಟಿ ರೂಪಾಯಿ ಮೌಲ್ಯದ ಹನ್ನೊಂದು ಪ್ರಮುಖ ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಪ್ರತ್ಯೇಕತಾವಾದ ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ಉತ್ತೇಜಿಸುವ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು ರಾಜ್ಯ ತನಿಖಾ ಸಂಸ್ಥೆ (SIA) ಜಮ್ಮು ಮತ್ತು ಕಾಶ್ಮೀರದಾದ್ಯಂತ ಜಮಾತ್-ಎ-ಇಸ್ಲಾಮಿ ಸೇರಿದ ಸುಮಾರು 200 ಆಸ್ತಿಗಳನ್ನು ಜಪ್ತಿ ಮಾಡಿಕೊಂಡಿದೆ ಎಂದು ಹೇಳಲಾಗಿದೆ.

ಈ ತಿಂಗಳ ಆರಂಭದಲ್ಲಿಶಾಲಾ ಕಟ್ಟಡದಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಸುತ್ತಿದ್ದರೆನ್ನಲಾದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಒಂಬತ್ತು ಆಸ್ತಿಗಳನ್ನು ಜಪ್ತಿಮಾಡಿಕೊಂಡಿತ್ತು.

ಇದನ್ನೂ ಓದಿ: ಎಲೆಚುಕ್ಕಿ ರೋಗ ತಡೆಗೆ 10 ಕೋಟಿ ರೂ. ಬಿಡುಗಡೆ: ಸಿಎಂ ಬೊಮ್ಮಾಯಿ

Advertisement

Udayavani is now on Telegram. Click here to join our channel and stay updated with the latest news.

Next