ಕಾಂಚೀಪುರಂ: ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ಬುಧವಾರ ಪಟಾಕಿ ಘಟಕವೊಂದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, 19 ಮಂದಿ ಗಂಭೀರ ಸುಟ್ಟ ಗಾಯಗಳಿಗೆ ಒಳಗಾಗಿದ್ದಾರೆ.
Advertisement
ಅಗ್ನಿಶಾಮಕ ದಳಕ್ಕೆ ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯ ನಡೆಸಿದ್ದಾರೆ . ಸುಟ್ಟ ಗಾಯಗಳಾಗಿರುವ 19 ಜನರ ಪೈಕಿ 11 ಮಂದಿಯನ್ನು ಕಾಂಚೀಪುರಂ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಎಂಟು ಮಂದಿಯನ್ನು ಬೇರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಅವಘಡದ ಕಾರಣವನ್ನು ಪೊಲೀಸರು ಇನ್ನಷ್ಟೇ ಪತ್ತೆ ಮಾಡಬೇಕಿದೆ.