Advertisement

ಪಾವಗಡ: ಕ್ರೇನ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

02:51 PM Oct 23, 2022 | Team Udayavani |

ಪಾವಗಡ: ದ್ವಿಚಕ್ರ ವಾಹನದೊಂದಿಗೆ ನಿಂತಿದ್ದಾಗ ಪಟ್ಟಣದ ಕಡೆಯಿಂದ ಬರುತ್ತಿದ್ದ ಕ್ರೇನ್ ವಾಹನ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ದ್ವಿ ಚಕ್ರ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಟ್ಟಣದ ಹೊರ ವಲಯದ ಕಣಿವೇನಹಳ್ಳಿ ಗೇಟ್ ಬಳಿ ನಡೆದಿದೆ.

Advertisement

ಕಣಿವೆನಹಳ್ಳಿ ಗ್ರಾಮದ ನಿವಾಸಿ ಶ್ರೀನಿವಾಸ್ (50) ಮೃತಪಟ್ಟ ವ್ಯಕ್ತಿ.

ಸ್ಥಳಕ್ಕೆ ಪಾವಗಡ ಪೊಲೀಸ್ ಠಾಣೆಯ  ಪೊಲೀಸ್ ಇನ್ಸ್‌ಪೆಕ್ಟರ್ ಅಜಯ್ ಸಾರಥಿ ಭೇಟಿ ನೀಡಿ, ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next