Advertisement
ಕಾಲಹರಣ: ಸತತ ಬರಗಾಲದಿಂದ ಬೆಳೆನಷ್ಟಕ್ಕೆ ಒಳಗಾದ ರೈತರಿಗೆ ಒಂದು ರೂಪಾಯಿ ಪರಿಹಾರ ನೀಡದಿರುವ ಸರ್ಕಾರದ ಕ್ರಮವನ್ನು ಟೀಕಿಸಿದ ಅವರು, ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರ ಅನಗತ್ಯ ವಿಷಯಗಳ ಚರ್ಚೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳಲು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಹೇಳಿದರು.
Related Articles
Advertisement
ನಿಮ್ಮ ಭರವಸೆಗಳ ಈಡೇರಿಕೆ ಕೇವಲ ಪುಸ್ತಕಕ್ಕೆ ಸೀಮಿತವಾಗಿದೆ. ನೀವು ನೀಡಿದ್ದ ಭರವಸೆ ಈಡೇರಿಸಿದ್ದರೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರಲಿಲ್ಲ ಎಂದರು. ಕೃಷಿ ಉತ್ಪನ್ನಗಳಿಗೆ ರೈತರು ನಿಗದಿ ಮಾಡಿದ ಬೆಲೆ ದೊರೆಯುವಂತೆ ಮಾಡುವೆ ಎಂಬ ನಿಮ್ಮ ಭರವಸೆ ಏನಾಯಿತು ಎಂದು ಟೀಕಿಸಿದರು.
ರಾಜ್ಯದ ಜನರ ಮೇಲೆ ಸಾಲ ಹೊರಿಸುವ ಭರವಸೆಯನ್ನೇನಾದರೂ ನೀಡಿದ್ದರೆ ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಈಡೇರಿಸಿದ್ದಾರೆ ಎಂದು ಕುಹಕವಾಡಿದರು. ಸ್ಟೀಲ್ ಬ್ರಿàಡ್ಜ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರ ಏನೇ ನಿರ್ಧಾರ ಕೈಗೊಂಡರೂ ಅದು ವಿವಾದಕ್ಕೆ ಕಾರಣವಾಗುತ್ತಿದೆ. ಇಂತಹ ಉದ್ಧಟತನದ ನಿರ್ಧಾರ ಕೈಗೊಳ್ಳುವ ಸರ್ಕಾರಕ್ಕೆ ಜನರೇ ಮುಂದಿನ ದಿನಗಳಲ್ಲಿ ಪಾಠ ಕಲಿಸಲಿದ್ದಾರೆ ಎಂದರು.
ಮರುಜೀವ: ತಮ್ಮ ವೇಗಕ್ಕೆ ಕಡಿವಾಣ ಹಾಕುವ ಸಲುವಾಗಿಯೇ 11 ವರ್ಷಗಳ ಹಿಂದೆ ಜನಾರ್ದನ ರೆಡ್ಡಿ ಮಾಡಿದ್ದ ಗಣಿ ಲಂಚ ಆರೋಪ ಪ್ರಕರಣಕ್ಕೆ ಸರ್ಕಾರ ಮರು ಜೀವ ನೀಡಿದೆ. ಜಂತಕಲ್ ಮೈನಿಂಗ್ ಪ್ರಕರಣದ ಎಸ್‌ಐಟಿ ತನಿಖೆಗೆ ಆದೇಶಿಸುವ ಮೂಲಕ ತಮ್ಮ ವರ್ಚಸ್ಸು ಹಾಳು ಮಾಡಲು ಸುಪ್ರೀಂಕೋರ್ಟ್ ವಜಾ ಮಾಡಿರುವ ಪ್ರಕರಣಕ್ಕೆ ಮರು ಜೀವ ನೀಡಲಾಗಿದೆ ಎಂದು ಹರಿಹಾಯ್ದರು.
ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧಪಕ್ಷಗಳು ತೆಗೆದುಕೊಳ್ಳುವ ತೀರ್ಮಾನ ಆಧರಿಸಿ ಜೆಡಿಎಸ್ ನಿರ್ಧಾರ ಕೈಗೊಳ್ಳಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಈ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು. ಇದಕ್ಕೂ ಮುನ್ನ ಎಚ್.ಡಿ.ಕುಮಾರಸ್ವಾಮಿ ಹುಣ್ಣಿಮೆ ನಿಮಿತ್ತ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಶಾಸಕ ಜಿ.ಟಿ.ದೇವೇಗೌಡ, ಮೇಯರ್ ಎಂ.ಜೆ.ರವಿಕುಮಾರ್ ಇತರರು ಹಾಜರಿದ್ದರು.