ಕೋಲಾರ: ಖಾಸಗಿ ಶಾಲಾ ಶುಲ್ಕ ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡಿ ಸಂಕಷ್ಟದಲ್ಲಿರುವ ಪೋಷಕರ ರಕ್ಷಣೆಗೆ ನಿಲ್ಲಬೇಕೆಂದು ರೈತ ಸಂಘದಿಂದ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಮಕ್ಕಳಿಗೆ ಆಂಗ್ಲ ಮಾಧ್ಯಮ ಕಲಿಸುವ ನೆಪದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು 50 ಸಾವಿರದಿಂದ 1 ಲಕ್ಷದ ವರೆಗೂ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಆಂಗ್ಲಮಾದ್ಯಮ ಸಿಬಿಎಸ್‌ಇ ಹೆಸರಿನಲ್ಲಿ ಅಕ್ರಮ ದಾಖಲೆಗಳನ್ನು ಸೃಷ್ಟಿಸಿ ಮಾಡಿ ಅನಧಿಕೃತ ಶಾಲೆಗಳನ್ನು ಪ್ರಾರಂಭ ಮಾಡುತ್ತಿದ್ದರೂ ಇಲಾಖೆ ಅಧಿಕಾರಿಗಳು ಮೌನವಹಿಸಿದ್ದಾರೆ. ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ ಶಿಕ್ಷಣ ಇಲಾಖೆ ವಿರುದ್ಧ ಅಪರ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರು.
ಸಾಂಕ್ರಾಮಿಕ ರೋಗಗಳು ಪ್ರಕೃತಿ ವಿಕೋಪಗಳಿಂದ ರೈತರು ಬೆಳೆದ ಬೆಳೆಗಳಿಗೆ ಬೆಲೆ ಇಲ್ಲದೆ ದುಡಿಯುವ ಕೈಗೆ ಕೆಲಸವಿಲ್ಲದೆ ಸಂಸಾರ ನಿರ್ವಹಣೆ ನಡೆಸಲು ಪರಿತಪ್ಪಿಸುತ್ತಿರುವ ಸಮಯದಲ್ಲಿ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮುಖಾಂತರ ಗಾಯದ ಮೇಲೆ ಬರೆ ಎಳೆದಂತೆ ಈಗ ಮಕ್ಕಳ ಭವಿಷ್ಯವನ್ನು ರೂಪಿಸುತ್ತಿರುವ ಪೋಷಕರಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ನೀಡುತ್ತಿರುವ ಡೊನೇಶನ್ ಪಟ್ಟಿ ನೋಡಿ ಶಿಕ್ಷಣವು ಬೇಡ ಜೀವನವು ಬೇಡ ಎಂಬ ಮಟ್ಟಕ್ಕೆ ಮನಸ್ಸು ರೋಶಿಹೋಗಿದೆ ಎಂದು ಅಪರ ಜಿಲ್ಲಾ ಧಿಕಾರಿಗಳಿಗೆ ಮನವರಿಕೆ ಮಾಡಿದರು.
ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ ಮಾತನಾಡಿ, ಲಕ್ಷ ಲಕ್ಷ ಸಂಬಳ ಪಡೆದು ಸರ್ಕಾರಿ ಶಾಲೆಗಳನ್ನು ಅಭಿವೃದ್ದಿ ಪಡಿಸಿ ಮಕ್ಕಳ ಹಾಜರಾತಿಯನ್ನು ಹೆಚ್ಚಳ ಮಾಡಲು ಸರ್ಕಾರದ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸಲು ಯೋಚಿಸುತ್ತಿದ್ದಾರೆ. ಜಾಗೃತಿ ಮೂಡಿಸುವಲ್ಲಿ ಶಿಕ್ಷಕರು ವಿಫಲರಾಗಿದ್ದು, ಸರ್ಕಾರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳದೆ ಅನ್ಯಾಯ ಮಾಡುತ್ತಿದೆ ಎಂದು ಅಸಮದಾನ ವ್ಯಕ್ತಪಡಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಅಪರ ಜಿಲ್ಲಾ ಧಿಕಾರಿ ಸ್ನೇಹಾ ರವರು ಕ್ರಮವಹಿಸುವ ಭರವಸೆ ನೀಡಿದರು.
ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣ ಗೌಡ, ಮಹಿಳಾ ಜಿಲ್ಲಾಧ್ಯಕ್ಷ ಎ.ನಳಿನಿಗೌಡ, ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಹಸಿರು ಸೇನೆ ತಾಲೂಕು ಅಧ್ಯಕ್ಷ ವೇಣು, ಜಿಲ್ಲಾಧ್ಯಕ್ಷ ಐತಂಡಹಳ್ಳಿ ಮಂಜುನಾಥ, ಜಿಲ್ಲಾ ಸಂಚಾಲಕ ಕೆ. ಶ್ರೀನಿವಾಸಗೌಡ, ಯುವ ರೈತ ಮುಖಂಡ ನವೀನ್, ವೇಣು, ಪದ್ಮಘಟ್ಟ ಧರ್ಮ, ನಂಗಲಿ ನಾಗೇಶ್, ಕಿಶೋರ್, ರಾಮಮೂರ್ತಿ ಅಣ್ಣೆಹಳ್ಳಿ ನಾಗರಾಜ, ಕೋಲಾರ ಅಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಾಲೂರು ಅಧ್ಯಕ್ಷ ಯಲ್ಲಣ್ಣ, ಫಾರೂಕ್‌ಪಾಷ, ಶ್ರೀನಿವಾಸಪುರ ಅಧ್ಯಕ್ಷ ತೆರ್ನಹಳ್ಳಿ ಆಂಜಿನಪ್ಪ, ಬಂಗಾರಿ ಮಂಜುನಾಥ, ಜುಬೇರ್, ವಕ್ಕಲೇರಿ ಹನುಮಯ್ಯ ಇತರರು ಇದ್ದರು.