Advertisement

ಕೋವಿಡ್ ಚಿಕಿತ್ಸೆಯ ಮೇಲೆ ನಿಗಾ ಇಡಲು ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಿ: ಸಿದ್ದರಾಮಯ್ಯ

02:49 PM Jun 30, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಚಿಕಿತ್ಸೆಗೆ ಸಂಬಂಧಿಸಿದಂತೆ ದೂರುಗಳು ಇವುಗಳ ಮೇಲೆ ನಿಗಾ ಇಡಲು ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು. ಪಕ್ಷಗಳಲ್ಲಿರುವ ವೃತ್ತಿನಿರತ ನಾಯಕರನ್ನು ಹಾಗೂ ವೈದ್ಯಕೀಯ ಶಿಕ್ಷಣ ಪಡೆದಿರುವವರನ್ನು ಸಮಿತಿಗೆ ಸೇರಿಸಿಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋವಿಡ್-19 ಚಿಕಿತ್ಸೆಗೆ ಮೀಸಲಿಟ್ಟಿರುವ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಿರ್ಲಕ್ಷ, ತಾರತಮ್ಯ ನೀತಿ ಮತ್ತು ಭ್ರಷ್ಟಾಚಾರದ ಆರೋಪಗಳಿವೆ. ರಾಜಕೀಯ ಪ್ರಭಾವ ಬಳಸಿ ಬಲವಿದ್ದವರು ಬದುಕಿಕೊಳ್ಳುತ್ತಾರೆ, ಬಡವರಿಗೆ ದಿಕ್ಕಿಲ್ಲದಂತಹ ಸ್ಥಿತಿ. ಮುಖ್ಯಮಂತ್ರಿಯವರೆ ಈ ಕಡೆ‌ ಗಮನ ಹರಿಸಿ ಎಂದಿದ್ದಾರೆ.

ರೋಗಿಗಳಿಗೆ ತಾನು ಪಡೆಯುತ್ತಿರುವ ಚಿಕಿತ್ಸೆಯ ಸಂಪೂರ್ಣ ವಿವರ ಪಡೆಯುವ ಕಾನೂನುಬದ್ದ ಹಕ್ಕಿದೆ. ಸೋಂಕಿತರಿಗೆ ನೀಡುತ್ತಿರುವ ಔಷಧಿ,‌ಅನುಸರಿಸುತ್ತಿರುವ ಚಿಕಿತ್ಸಾ ವಿಧಾನ ಏನು ಎಂಬುದನ್ನು ತಿಳಿಸದೆ ರೋಗಿಗಳನ್ನು ಕತ್ತಲಲ್ಲಿಡಲಾಗುತ್ತಿದೆ. ಯಡಿಯೂರಪ್ಪನವರೇ ಇದು ಅನ್ಯಾಯವಲ್ಲವೇ  ಎಂದು ಪ್ರಶ್ನಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಚಿಕಿತ್ಸೆಗೆ ಅವಕಾಶ ಸ್ವಾಗತಾರ್ಹ‌ ಕ್ರಮ. ಚಿಕಿತ್ಸಾ ಶುಲ್ಕ ಕಡಿಮೆ ಮಾಡಲು ಒಪ್ಪಿರುವ ಖಾಸಗಿಯವರು ಚಿಕಿತ್ಸೆಯ ಗುಣಮಟ್ಟದಲ್ಲಿ ರಾಜಿಯಾಗದಂತೆ ನಿಗಾ ಇಡಬೇಕು. ಸೋಂಕಿತರಿಗೆ, ನೀಡುತ್ತಿರುವ ಔಷಧಿ ಮತ್ತು ಅನುಸರಿಸಲಾಗುತ್ತಿರುವ ಚಿಕಿತ್ಸಾ ವಿಧಾನದದ ಸಂಪೂರ್ಣ ಮಾಹಿತಿಯನ್ನು ಮೊದಲೇ ನೀಡಬೇಕು ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next