Advertisement

“ಕ್ರಿಮಿನಲ್ ರಾಜಕಾರಣಿಗಳ ತ್ವರಿತ ವಿಚಾರಣೆಗೆ ವಿಶೇಷ ಕೋರ್ಟ್ ರಚಿಸಿ”

04:06 PM Nov 01, 2017 | Team Udayavani |

ನವದೆಹಲಿ: ಕ್ರಿಮಿನಲ್ ಅಪರಾಧ ಹೊಂದಿರುವ ಸಂಸದರು, ಶಾಸಕರ ತ್ವರಿತಗತಿ ವಿಚಾರಣೆಗಾಗಿ ವಿಶೇಷ ಕೋರ್ಟ್ ಗಳನ್ನು ಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

Advertisement

ಕ್ರಿಮಿನಲ್ ಹಿನ್ನೆಲೆಯ ಸಂಸದರು, ಶಾಸಕರ ವಿರುದ್ಧದ ಪ್ರಕರಣಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸುವಂತೆ ಆದೇಶ ನೀಡಿದೆ. ದೇಶದ ಹಿತದೃಷ್ಟಿಯಿಂದ ಇದು ತುಂಬಾ ಅಗತ್ಯವಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ವಿಶೇಷ ಕೋರ್ಟ್ ಸ್ಥಾಪಿಸುವ ಕುರಿತು ಯೋಜನೆಯನ್ನು ಅಂತಿಮಗೊಳಿಸಿ ಡಿಸೆಂಬರ್ 13ರೊಳಗೆ ಕೋರ್ಟ್ ಗೆ ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರಕ್ಕೆ ಸೂಚನೆ ನೀಡಿದೆ.

ಅಲ್ಲದೇ 2014ರಿಂದ 1581 ಜನಪ್ರತಿನಿಧಿಗಳ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಸ್ಥಿತಿಗತಿ ಬಗ್ಗೆ ವರದಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅದೇ ರೀತಿ 2014 ಮತ್ತು 2017ರವರೆಗೆ ದಾಖಲಾಗಿರುವ ಕೇಸ್ ಗಳ ಮಾಹಿತಿಯನ್ನು ನೀಡುವಂತೆ ತಿಳಿಸಿದೆ. ಏತನ್ಮಧ್ಯೆ ಕ್ರಿಮಿನಲ್ ರಾಜಕಾರಣಿಗಳ ವಿರುದ್ಧ ಚುನವಣೆಗೆ ನಿಲ್ಲದಂತೆ ಆಜೀವ ನಿಷೇಧ ಹೇರುವುದು ಬೇಡ ಎಂಬುದಾಗಿ ಕೇಂದ್ರ ಸರ್ಕಾರದ ಪರ ವಕೀಲರು ವಾದ ಮಂಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next