Advertisement

ಬಜೆಟ್‌ಗೆ ಕ್ರೆಡಾಯ್‌ ಸ್ವಾಗತ

01:30 AM Jul 06, 2019 | Sriram |

ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ಮೂಲ ಸೌಕರ್ಯ ಅಭಿವೃದ್ದಿಗೆ 100 ಲಕ್ಷ ಕೋಟಿ ರೂ. ಅನುದಾನ ವಿನಿಯೋಗಿಸುವುದಾಗಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ಪ್ರಕಟಿಸಿರುವುದು ಶ್ಲಾಘನೀಯ ಎಂದು ರಿಯಲ್‌ ಎಸ್ಟೇಟ್‌, ಡೆವಲಪರ್ ಸಂಸ್ಥೆಗಳ ಒಕ್ಕೂಟ(ಕ್ರೆಡಾಯ್‌) ಬೆಂಗಳೂರು ಅಧ್ಯಕ್ಷ ಕಿಶೋರ್‌ ಜೈನ್‌ ಹೇಳಿದ್ದಾರೆ.

Advertisement

ಕೇಂದ್ರ ಸರ್ಕಾರವು ಕಾರ್ಪೋರೇಟ್‌ ಇಂಡಿಯಾ ಹಾಗೂ ನವ ಭಾರತ ನಿರ್ಮಾಣದ ದೂರದೃಷ್ಟಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದೆ. ಉದ್ಯೋಗ ಸೃಷ್ಟಿ ಹಾಗೂ ವಸತಿ ಸೌಲಭ್ಯ ಕಲ್ಪಿಸುವಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮದ ಪಾತ್ರವನ್ನು ಸರ್ಕಾರ ಗುರುತಿಸಿದೆ. ಹಳೆಯ ಬಾಡಿಗೆ
ನಿಯಮಗಳ ಬದಲಾವಣೆ ಹಾಗೂ ಸರ್ಕಾರಿ ಭೂಮಿಯಲ್ಲಿ ವಸತಿ ಯೋಜನೆಗಳನ್ನು ಕೈಗೊಳ್ಳಬೇಕೆಂಬ ಪ್ರಸ್ತಾವಕ್ಕೂ ಸ್ಪಂದನೆ ಸಿಕ್ಕಿರುವುದು ತೃಪ್ತಿ ತಂದಿದೆ ಎಂದು ತಿಳಿಸಿದ್ದಾರೆ. ಜತೆಗೆ 2022ರ ವೇಳೆಗೆ ಎಲ್ಲರಿಗೂ ವಸತಿ ಸೌಲಭ್ಯ ಕಲ್ಪಿಸುವ ಗುರಿ ಹೊಂದಿರುವುದು ಶ್ಲಾಘನೀಯ. ಗೃಹ ಸಾಲಕ್ಕೆ 1.50
ಲಕ್ಷ ರೂ.ವರೆಗೆ ಬಡ್ಡಿ ವಿನಾಯ್ತಿ ನೀಡಿರುವುದು ವಸತಿ ಯೋಜನೆಗಳಿಗೆ ಇನ್ನಷ್ಟು ಉತ್ತೇಜನ ನೀಡುವ ನಿರೀಕ್ಷೆ ಮೂಡಿದೆ. ರಿಯಲ್‌ ಎಸ್ಟೇಟ್‌ ಉದ್ಯಮದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸಿರುವುದರಿಂದ ಹೆಚ್ಚು ಹೂಡಿಕೆಯಾಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next