Advertisement

ಸಿಆರ್‌ಎಫ್‌ ಅನುದಾನ ಹೆಚ್ಚಳಕ್ಕೆ ಆಗ್ರಹ 

06:45 AM Jun 18, 2018 | Team Udayavani |

ಬೆಳಗಾವಿ: ಕೇಂದ್ರದ ಸಿಆರ್‌ಎಫ್‌ ಯೋಜನೆಯಡಿ ರಾಜ್ಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ
ಕೇಂದ್ರಕ್ಕೆ ಮನವಿ ಮಾಡಿಕೊಳ್ಳುವ ವಿಚಾರವಾಗಿ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಹಾಗೂ ಹಣಕಾಸು ಇಲಾಖೆ ಕಾರ್ಯದರ್ಶಿಗಳ ಸಭೆ ನಡೆಸಲಾಗುವುದು ಎಂದು ಲೋಕೋಪ ಯೋಗಿ ಸಚಿವ ಎಚ್‌.ಡಿ. ರೇವಣ್ಣ ಹೇಳಿದರು.

Advertisement

ಭಾನುವಾರ ನಗರದ ಜಿಪಂ ಸಭಾಭವನದಲ್ಲಿ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಈಚೆಗೆ ಸುರಿದ ಭಾರಿ ಮಳೆ ಹಾಗೂ ನೆರೆ ಹಾವಳಿಯಿಂದ ಹಾಳಾಗಿರುವ ರಸ್ತೆ, ಸೇತುವೆ, ಸಿಡಿ ಹಾಗೂ ಕಟ್ಟಡಗಳ ಸ್ಥಿತಿ ಮತ್ತು ದುರಸ್ತಿ ಬಗ್ಗೆ ಅಧಿಕಾರಿಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,ಕೇಂದ್ರದ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ನಿಯೋಗದ ಮೂಲಕ ಭೇಟಿ ಮಾಡಲಾಗುವುದು.

ಕೇಂದ್ರ ಸರಕಾರ ಈಗ ನೀಡುತ್ತಿರುವ ಸಿಆರ್‌ಎಫ್‌ ಹಣ ಸಾಲುವುದಿಲ್ಲ. ಇದರಿಂದ ಸಾಕಷ್ಟು ಯೋಜನೆಗಳು
ಅರ್ಧಕ್ಕೆ ನಿಂತಿವೆ. ಕೆಲಸ ಮಾಡಿದರೂ ಹಣ ಬಿಡುಗಡೆಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ ಕೇಂದ್ರ ಸಚಿವರನ್ನು
ಭೇಟಿ ಮಾಡಿ ರಾಜ್ಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಪ್ರಯತ್ನಿಸಬೇಕೆಂದು ಸಂಸದರಾದ ಸುರೇಶ ಅಂಗಡಿ ಹಾಗೂ ಪ್ರಕಾಶ ಹುಕ್ಕೇರಿ ಅವರಲ್ಲಿ ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next