ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೋಜಿನ ಜೀವನ ಹಾಗೂ ಕ್ರಿಕೆಟ್ ಬೆಟ್ಟಿಂಗ್‌ಗಾಗಿ ದ್ವಿಚಕ್ರ ವಾಹನಗಳನ್ನುಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡು ಸಾಲ ತೀರಿಸಲು ಮನೆಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಯುವಕನೊಬ್ಬನನ್ನು ಭಾರತೀ ನಗರ ಪೊಲೀಸರು ಬಂಧಿಸಿದ್ದಾರೆ.
ಆಂಧ್ರ ಪ್ರದೇಶದ ಕುಪ್ಪಂ ಜಿಲ್ಲೆಯ ಲಕ್ಷ್ಮೀಪತಿ (24) ಬಂಧಿತ. ಆರೋಪಿಯಿಂದ 4 ಲಕ್ಷ ರೂ.ಮೌಲ್ಯದ 10 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಲಕ್ಷ್ಮೀಪತಿ ಐಟಿಐ ಫಿಟ್ಟರ್ ವ್ಯಾಸಂಗ ಮಾಡಿದ್ದು, ಹೊಸೂರು ಬಳಿಯ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಇದರೊಂದಿಗೆ ಕ್ರಿಕೆಟ್ ಜೂಜಾಟದಲ್ಲಿ ತೊಡಗಿಸಿಕೊಂಡಿದ್ದು, ಹಣ ಕಳೆದುಕೊಂಡಿದ್ದ. ಅದರಿಂದಲಕ್ಷಾಂತರ ರೂ.ಸಾಲ ಮಾಡಿಕೊಂಡಿದ್ದ. ಅದನ್ನು ತೀರಿಸಲು ಬೇರೆ ಮಾರ್ಗವಿಲ್ಲದೆ, ಮನೆ ಮುಂದೆ ನಿಂತಿರುವ ದ್ವಿಚಕ್ರ ವಾಹನಗಳನ್ನು ಕದ್ದು ಕಡಿಮೆ ಮೊತ್ತಕ್ಕೆ ಮಾರಾಟಮಾಡುತ್ತಿದ್ದ. ಈತ ಬೆಂಗಳೂರಿನ ಆಡುಗೋಡಿ, ಭಾರತೀನಗರ ಠಾಣೆ ವ್ಯಾಪ್ತಿಮಾತ್ರವಲ್ಲದೆ, ತಮಿಳುನಾಡಿನ ಕೃಷ್ಣಗಿರಿಯಲ್ಲೂ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಹೇಳಿದರು. ಭಾರತೀನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಬ್ಬರ ಬಂಧನ: ಮತ್ತೂಂದು ಪ್ರಕರಣದಲ್ಲಿ ಮನೆ ಮುಂದೆ ಹಾಗೂ ಪಾರ್ಕಿಂಗ್ ಸ್ಥಳಗಳಲ್ಲಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೊಹಮ್ಮದ್ ಯೂಸೆಫ್ ಷರೀಫ್(26) ಮತ್ತು ಫರೀದ್ ಖಾನ್ (28) ಬಂಧಿತರು. ಆರೋಪಿಗಳಿಂದ 6.5 ಲಕ್ಷರೂ. ಮೌಲ್ಯದ 8 ದ್ವಿಚಕ್ರ ವಾಹನಗಳನ್ನುವಶಕ್ಕೆ ಪಡೆಯಲಾಗಿದೆ. ಆರೋಪಿಗಳುಏ.13ರಂದು ಠಾಣೆ ವ್ಯಾಪ್ತಿಯಲ್ಲಿ ಕೆಟಿಎಂಬೈಕ್ ಕಳವು ಮಾಡುತ್ತಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನುಬಂಧಿಸಲಾಗಿದೆ. ಆರೋಪಿಗಳು ಈ ಹಿಂದೆಯೂ ವಿವಿಧೆಡೆ ಬೈಕ್ ಕಳ್ಳತನದಲ್ಲಿ ಭಾಗಿಯಾಗಿದ್ದರು ಎಂಬ ಮಾಹಿತಿಯಿದೆ. ಈ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.