Advertisement

ಕ್ರಿಕೆಟ್‌ ಬೆಟ್ಟಿಂಗ್‌: ಆರೋಪಿ ಬಂಧನ

06:13 PM Apr 08, 2019 | Lakshmi GovindaRaju |

ಬೆಂಗಳೂರು: ಐಪಿಎಲ್‌ ಕ್ರಿಕೆಟ್‌ ಪಂದ್ಯವೊಂದರ ಮೇಲೆ ಬೆಟ್ಟಿಂಗ್‌ ನಡೆಸುತ್ತಿದ್ದ ವ್ಯಕ್ತಿಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಎಚ್‌.ಚಂದ್ರೇಗೌಡ (38) ಬಂಧಿತ ಆರೋಪಿ.

Advertisement

ಏ.4ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಸನ್‌ರೈಸರ್ ಹೈದರಾಬಾದ್‌ ನಡುವಿನ ಪಂದ್ಯಕ್ಕೆ ಹಣ ಕಟ್ಟಿಸಿಕೊಂಡು ಮೊಬೈಲ್‌ ಆ್ಯಪ್‌ ಮೂಲಕ ಬೆಟ್ಟಿಂಗ್‌ ನಡೆಸುತ್ತಿದ್ದ.

ಜತೆಗೆ, ಈಗಾಗಲೇ ಹಲವರಿಂದ ಹಣ ಪಡೆದು ವಾಪಾಸ್‌ ನೀಡದೆ ವಂಚಿಸಿದ್ದ ಎಂಬ ಬಗ್ಗೆ ಮಾಹಿತಿ ಆಧರಿಸಿ ಹಳೇ ಮದ್ರಾಸ್‌ ರಸ್ತೆಯ ಹೋಟೆಲ್‌ ಮುಂಭಾಗದ ಪಾರ್ಕಿಂಗ್‌ ಸ್ಥಳದಲ್ಲಿ ಬೆಟ್ಟಿಂಗ್‌ ನಡೆಸುತ್ತಿದ್ದಾಗ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿಯಿಂದ ಆರು ಲಕ್ಷ ರೂ. ಹಾಗೂ ಬೆಟ್ಟಿಂಗ್‌ಗೆ ಬಳಸುತ್ತಿದ್ದ ಎರಡು ಮೊಬೈಲ್‌ ಫೋನ್‌ ಜಪ್ತಿ ಮಾಡಲಾಗಿದೆ. ಆರೋಪಿ ಜತೆ ಬೆಟ್ಟಿಂಗ್‌ ನಡೆಸುತ್ತಿದ್ದ ಬುಕ್ಕಿ ಕೃಷ್ಣಪ್ಪ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next