Advertisement

ದಯವಿಟ್ಟು ಪಂತ್ ರನ್ನು ನೋಡಲು ಆಸ್ಪತ್ರೆ ಕಡೆಗೆ ಬರಬೇಡಿ: ಡಿಡಿಸಿಎ ನಿರ್ದೇಶಕರ ಮನವಿ

09:02 AM Jan 01, 2023 | Team Udayavani |

ಡೆಹ್ರಾಡೂನ್: ಕಳೆದ ಶುಕ್ರವಾರ ರಸ್ತೆ ಅಪಘಾತದಲ್ಲಿ ಗಾಯಗೊಂಡು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತೀಯ ಕ್ರಿಕೆಟಿಗ ರಿಷಭ್ ಪಂತ್ ಅವರನ್ನು ನೋಡಲು ಜನರು ಬರುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಸ್ಪತ್ರೆಗೆ ಬಂದರೆ ಅಪಾಯವಾಗುವ ಸಾಧ್ಯತೆಯಿದೆ, ಹೀಗಾಗಿ ಜನರು ಬರದಂತೆ ಅಧಿಕಾರಿಗಳು ಸೂಚನೆ ನೀಡಿದೆ.

Advertisement

ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (ಡಿಡಿಸಿಎ) ನಿರ್ದೇಶಕ ಶ್ಯಾಮ್ ಶರ್ಮಾ ಅವರು, ‘ಪಂತ್ ಅವರನ್ನು ಭೇಟಿ ಮಾಡಲು ಹೋಗುವವರಿಂದ ಇನ್ಫೆಕ್ಷನ್ ಆಗುವ ಸಾಧ್ಯತೆಗಳಿರುವುದರಿಂದ ತಪ್ಪಿಸಬೇಕು’ ಎಂದು ಅವರು ಹೇಳಿದರು.

‘ಪಂತ್ ಅವರನ್ನು ಭೇಟಿ ಮಾಡಲು ಯಾವುದೇ ವಿಐಪಿ ಚಲನೆ ಇರಬಾರದು. ಪಂತ್‌ ಗೆ ಸೋಂಕಿನ ಸಾಧ್ಯತೆಗಳಿರುವುದರಿಂದ ಅವರನ್ನು ಭೇಟಿ ಮಾಡುವುದನ್ನು ಜನರು ತಪ್ಪಿಸಬೇಕು” ಎಂದು ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ ಹೇಳಿದರು.

ಇದನ್ನೂ ಓದಿ:2023 ಸಿಹಿ ಕಹಿಯ ಸಮ್ಮಿಶ್ರ ಫಲ; ಇಲ್ಲಿದೆ ದ್ವಾದಶ ರಾಶಿಗಳ ವಾರ್ಷಿಕ ರಾಶಿಫಲ

ಶ್ಯಾಮ್ ಶರ್ಮಾ ಶನಿವಾರ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ಆಗಮಿಸಿ ಅಪಘಾತದ ನಂತರ ಅಲ್ಲಿ ದಾಖಲಾಗಿರುವ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಭೇಟಿ ಮಾಡಿದರು.

Advertisement

“ಅವರು ಸ್ಥಿರವಾಗಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ಬಿಸಿಸಿಐ ವೈದ್ಯರು ಇಲ್ಲಿನ ವೈದ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ. ಜಯ್ ಶಾ ಅದನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸದ್ಯಕ್ಕೆ, ಅವರು ಇಲ್ಲಿಯೇ ಚಿಕಿತ್ಸೆ ಪಡೆಯುತ್ತಾರೆ. ಅವರು ಕಾರನ್ನು ಗುಂಡಿಯಿಂದ ತಪ್ಪಿಸಲು ಹೋದಾಗ ಅಪಘಾತ ಸಂಭವಿಸಿತು ಎಂದು ಅವರು ನನಗೆ ಹೇಳಿದರು ಎಂದು ಶ್ಯಾಮ್ ಶರ್ಮಾ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next