Advertisement

Cricket; ಭಾರತ ತಂಡಕ್ಕೆ ಗೌತಮ್‌ ಗಂಭೀರ್‌ ಕೋಚ್‌?

01:33 AM May 18, 2024 | Team Udayavani |

ಮುಂಬಯಿ: ಭಾರತ ಕ್ರಿಕೆಟ್‌ ತಂಡದ ನೂತನ ಕೋಚ್‌ ಆಗಿ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಅವರನ್ನು ನೇಮಕ ಮಾಡಲು ಬಿಸಿಸಿಐ ಮನಸ್ಸು ಮಾಡಿದೆ. ಇದಕ್ಕಾಗಿ ಅಧಿಕಾರಿಗಳು ಗಂಭೀರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

Advertisement

ಪ್ರಸ್ತುತ ನಡೆಯುತ್ತಿರುವ ಐಪಿಎಲ್‌ ನಲ್ಲಿ ಕೆಕೆಆರ್‌ ತಂಡಕ್ಕೆ ಯಶಸ್ವಿ ಮಾರ್ಗದರ್ಶನ ನೀಡುತ್ತಿರುವ ಗಂಭೀರ್‌, ರಾಹುಲ್‌ ದ್ರಾವಿಡ್‌ ಅವರ ಸ್ಥಾನ ತುಂಬಲು ಅರ್ಹರು ಎಂದು ಬಿಸಿಸಿಐ ಭಾವಿಸಿದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next