Advertisement

ಉಗ್ರ ಚಟುವಟಿಕೆ ನಿಲ್ಲಿಸೋವರೆಗೂ ಪಾಕ್ ಜತೆ ಕ್ರಿಕೆಟ್ ಪಂದ್ಯಾಟವಿಲ್ಲ..

02:49 PM Jan 01, 2018 | Team Udayavani |

ನವದೆಹಲಿ: ಗಡಿಭಾಗದಲ್ಲಿ ಕದನ ವಿರಾಮ ಉಲ್ಲಂಘಿಸಿ ನಡೆಸುತ್ತಿರುವ ಗುಂಡಿನ ದಾಳಿ ಹಾಗೂ ಭಯೋತ್ಪಾದನೆಯನ್ನು ನಿಲ್ಲಿಸುವವರೆಗೂ ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ರೀತಿಯ ಕ್ರಿಕೆಟ್ ಪಂದ್ಯಾಟ ನಡೆಯುವುದು ಅಸಾಧ್ಯ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

Advertisement

ಸಂಸದೀಯ ಸಲಹಾ ಸಮಿತಿ ಜತೆಗಿನ ವಿದೇಶಾಂಗ ವ್ಯವಹಾರಗಳ ಕುರಿತ ಮಾತುಕತೆ ವೇಳೆಯಲ್ಲಿ ಸುಷ್ಮಾ ಸ್ವರಾಜ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾತುಕತೆಯಲ್ಲಿ ಸಚಿವರಾದ ಎಂಜೆ ಅಕ್ಬರ್ ಹಾಗೂ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ ಅವರು ಪಾಲ್ಗೊಂಡಿದ್ದರು.

ಪಾಕಿಸ್ತಾನ ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುತ್ತಿದ್ದು, ಗಡಿಯಲ್ಲಿ ನಿರಂತರವಾಗಿ ಪ್ರಚೋದನೆ ನೀಡುವ ಮೂಲಕ ವಿಧ್ವಂಸಕ ಕೃತ್ಯ ಎಸಗುವುದನ್ನು ಮುಂದುವರಿಸಿದೆ. ಈ ಹಿನ್ನೆಲೆಯಲ್ಲಿ ಪಾಕ್ ಜತೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಅಸಾಧ್ಯ ಎಂದು ಹೇಳಿದರು.

ಅಲ್ಲದೇ ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, 70ವರ್ಷ ವಯಸ್ಸಾದ ಪುರುಷರು ಅಥವಾ ಮಹಿಳಾ ಕೈದಿಗಳು, ಬುದ್ಧಿಮಾಂದ್ಯ ಕೈದಿಗಳನ್ನು ಮಾನವೀಯತೆ ನೆಲೆಯಲ್ಲಿ ಉಭಯ ದೇಶಗಳು ಬಿಡುಗಡೆ ಮಾಡುವ ಬಗ್ಗೆ ಪ್ರಸ್ತಾಪ ಸಲ್ಲಿಸಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next