ಬೆಳ್ತಂಗಡಿ: ಕ್ರಿಕೆಟಿಗೆ ಕೆ.ಎಲ್.ರಾಹುಲ್ ಜೂ. 25ರ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.
ರಾಹುಲ್ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದುಕೊಂಡರು.
ಆ ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಹೆಗ್ಗಡೆ ಕುಟುಂಬದವರು ಜತೆಯಲ್ಲಿದ್ದರು.
ಐಪಿಎಲ್ ವೇಳೆ ಗಾಯಗೊಂಡಿದ್ದ ಕೆಎಲ್ ರಾಹುಲ್ ಬಳಿಕ ಲಂಡನ್ ನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಏಷ್ಯಾಕಪ್ ವೇಳೆಗೆ ಅವರು ತಂಡ ಸೇರುವ ನಿರೀಕ್ಷೆಯಿದೆ.
ಮಂಗಳೂರು ಮೂಲದ ಕ್ರಿಕೆಟಿಗ ರಾಹುಲ್ ಕೆಲವೇ ತಿಂಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಭೇಟಿ ನೀಡಿದ್ದರು.