ಮುಂಬೈ: ಭಾರತದ ಮಾಜಿ ಕ್ರಿಕೆಟ್ ಆಟಗಾರ ಸುರೇಶ್ ರೈನಾ ಮತ್ತು ಗಾಯಕ ಗುರು ರಾಂಧವ ಅವರನ್ನು ಪೊಲೀಸರು ಬಂಧಿಸಿದ ಘಟನೆ ಮುಂಬೈ ನಲ್ಲಿ ನಡೆದಿದೆ. ನಂತರ ಇಬ್ಬರನ್ನೂ ಜಾಮೀನಿನಡಿ ಬಿಡುಗಡೆಗೊಳಿಸಲಾಯಿತು.
ಮುಂಬೈ ಪೊಲೀಸರು ವಿಮಾನ ನಿಲ್ದಾಣ ಬಳಿಯ ಡ್ರಾಗನ್ ಫ್ಲೈ ಕ್ಲಬ್ ಗೆ ದಾಳಿ ನಡೆಸಿದ್ದರು. ಈ ವೇಳೆ ಸುರೇಶ್ ರೈನಾ ಮತ್ತು ಗುರುರಾಂಧವ ಸೇರಿ 34 ಜನರನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದ 12ನೇ ಆರೋಪಿ ಬಂಧನ
ಕೋವಿಡ್ ನಿಯಾಮಾವಳಿಗಳ ಉಲ್ಲಂಘನೆ ಮಾಡಿದ ಆರೋಪದಡಿ ಸುರೇಶ್ ರೈನಾ, ಗುರು ರಾಂಧವ ಸೇರಿದಂತೆ 34 ಜನರನನ್ನು ಪೊಲೀಸರು ಬಂಧಿಸಿದರು. ಇವರಲ್ಲಿ ಏಳು ಮಂದಿ ಕ್ಲಬ್ ನ ಉದ್ಯೋಗಿಗಳನ್ನೂ ಬಂಧಿಸಲಾಗಿತ್ತು. ನಂತರ ಜಾಮೀನಿನಡಿ ಬಿಡುಗಡೆ ಮಾಡಲಾಗಿದೆ.
ಇವರುಗಳ ವಿರುದ್ಧ ಐಪಿಸಿ ಸೆಕ್ಷನ್ 188, 269, 34ರ ಅಡಿಯಲ್ಲಿ ಕೇಸು ದಾಖಲಾಗಿದೆ. ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಕ್ಲಬ್ ವ್ಯವಹಾರ ನಡೆಸುತ್ತಿದ್ದ ಕಾರಣ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೊಸ ವರ್ಷದ ಮುನ್ನ ಮಹಾರಾಷ್ಟ್ರ ಸರ್ಕಾರವು ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ಮತ್ತು ವಿಶೇಷವಾಗಿ ಮುಂಬೈಯಲ್ಲಿ ಸಾರ್ವಜನಿಕ ಚಟುವಟಿಕೆಗಳಿಗೆ ಸರಣಿ ನಿರ್ಬಂಧಗಳನ್ನು ವಿಧಿಸಿದೆ.