ಕಾಸರಗೋಡು: ಮಂಜೇಶ್ವರ ವಿಧಾನಸಭಾ ಚುನಾವಣೆ ಲಂಚ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಅವರನ್ನು ಒಂದನೇ ಆರೋಪಿಯಾಗಿಸಿ ಜಿಲ್ಲಾ ಕ್ರೈಂಬ್ರಾಂಚ್ ಕಾಸರಗೋಡು ಜಿಲ್ಲಾ ಸೆಶನ್ಸ್ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರದಲ್ಲಿ ಬಿಎಸ್ಪಿ ಅಭ್ಯರ್ಥಿಯಾಗಿದ್ದ ಕೆ.ಸುಂದರ ಅವರನ್ನು ಅಪಹರಿಸಿ ಬೆದರಿಕೆಯೊಡ್ಡಿದ ಬಳಿಕ 2.5 ಲಕ್ಷ ರೂ. ಹಾಗು ಮೊಬೈಲ್ ಫೋನ್ ನೀಡಿ ನಾಮಪತ್ರ ಹಿಂತೆಗೆಯುವಂತೆ ಮಾಡಿರುವುದಾಗಿ ಆರೋಪಿಸಲಾಗಿತ್ತು.
ಸುರೇಂದ್ರನ್, ಯುವಮೋರ್ಚಾ ಮಾಜಿ ರಾಜ್ಯ ಕೋಶಾಧಿಕಾರಿ ಸುನಿಲ್ ನಾಯ್ಕ, ಬಿಜೆಪಿ ರಾಜ್ಯ ಸಮಿತಿ ಸದಸ್ಯ ವಿ.ಬಾಲಕೃಷ್ಣ ಶೆಟ್ಟಿ, ಪ್ರಾದೇಶಿಕ ನೇತಾರರಾದ ಸುರೇಶ್ ನಾಯ್ಕ, ಕೆ.ಮಣಿಕಂಠ ರೈ, ಲೋಕೇಶ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ.