Advertisement
ಆರ್.ಕೆ.ಹೆಗ್ಗಡೆ ನಗರದ ನಿವಾಸಿ ಮೊಹಮ್ಮದ್ ಹುಸೇನ್ (32) ಬಂಧಿಸಿ ವಿಚಾರಣೆ ನಡೆಸಿದಾಗ ಇತರೆ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ದ. ಬಳಿಕ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದ ಅಚ್ಯುತ್ ಕುಮಾರ್ ಗಣಿ (33), ಅಕ್ಮಲ್ ಬೇಗ್ (32), ಅಮ್ಜದ್ (30) ಕೂಡ ಕೃತ್ಯದಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ.ಆರೋಪಿಗಳಿಂದ 30 ಲಕ್ಷ ರೂ. ಮೌಲ್ಯದ 660 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
Related Articles
Advertisement
ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸಿದರೂ ಪ್ರಯೋಜನವಾಗಿರಲಿಲ್ಲ. ಇತ್ತೀಚೆಗೆ ವೃತ್ತಿಪರ ಕಳ್ಳ ಮಹಮ್ಮದ್ ಹುಸೇನ್‌ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕಳೆದ 5 ವರ್ಷಗಳ ಹಿಂದೆ ಆನಂದ್ ಮನೆಯಲ್ಲಿ ನಡೆಸಿದ ಕಳ್ಳತನ ಕೃತ್ಯದ ಬಗ್ಗೆ ಬಾಯಿಬಿಟ್ಟಿದ್ದಾನೆ. ಜತೆಗೆ ಈಗಾಗಲೇ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಇತರ ಆರೋಪಿಗಳ ಬಗ್ಗೆಯೂ ಮಾಹಿತಿ ನೀಡಿದ್ದ. ಈ ಆಧಾರದ ಮೇಲೆ ನಾಲ್ವರನ್ನು ವಿಚಾರಣೆ ನಡೆಸಿ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಎಲ್ಲ ಆರೋಪಿಗಳು ಕಳ್ಳತನವನ್ನೇ ವೃತ್ತಿಯನ್ನಾಗಿಸಿದ್ದು, ಆರೋಪಿ ಅಚ್ಯುತ್ ಕುಮಾರ್ ಗಣಿ ವಿರುದ್ಧ ಸರಗಳ್ಳತನ, ಮನೆಗಳ್ಳತನ ಸೇರಿ ಒಟ್ಟು 180 ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.