Advertisement

Crime Inicident: ಎರಡು ಪ್ರತ್ಯೇಕ ಘಟನೆ; ಇಬ್ಬರ ಬರ್ಬರ ಕೊಲೆ

04:06 PM Feb 07, 2024 | Team Udayavani |

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಹಾಗೂ ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಪ್ರತ್ಯೇಕ ಘಟನೆಯಲ್ಲಿ ಇಬ್ಬರ ಕೊಲೆ ನಡೆದಿದೆ.  ನಗರದ ಹೊರ ‌ವಲಯದಲ್ಲೇ

Advertisement

ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈಲಾಗಿದೆ.‌

ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಕಲಬುರಗಿ ನಗರದ ಸೈಯದ್ ಚಿಂಚೋಳಿ ರಸ್ತೆಯಲ್ಲಿ ಕಳೆದ ತಡರಾತ್ರಿ ರೋಹನ್ ವಾಕಡೆ (22) ಎಂಬಾತನನ್ನ ಬರ್ಬರವಾಗಿ ಹತ್ಯೆಗೈಯ್ದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.‌

ಹಳೆ ವೈಷಮ್ಯ ಹಿನ್ನಲೆಯಲ್ಲಿ ರೋಹನ್‌ನನ್ನು ಹತ್ಯೆಗೈದಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹವನ್ನ ಜಿಲ್ಲಾಸ್ಪತ್ರೆಯ ಶವಗಾರದಲ್ಲಿಡಲಾಗಿದೆ.‌ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.  ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷುಲಕ ಕಾರಣಕ್ಕೆ  ಕೊಲೆ: ಯುವಕರ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ಭೀಮಳ್ಳಿಯಲ್ಲಿ ನಡೆದಿದೆ.

Advertisement

ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ಕೊಲೆ ನಡೆದಿದೆ.‌

ಮಶಾಖ ಮಕ್ಕಸವಾಲೆ(40) ಕೊಲೆಗೀಡಾದ ದುರ್ದೈವಿ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೋಡಿ ಪರಿಶೀಲನೆ ನಡೆಸಿದ್ದಾರೆ.

ಕೊಲೆ ಆರೋಪಿಗಳು ಪರಾರಿಯಾಗಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ಈ ಕುರಿತು ಕಲಬುರಗಿಯ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next