Advertisement

ಅಂತರ್‌ ಜಿಲ್ಲಾ ಕಳ್ಳರ ಬಂಧನ; ಒಂಬತ್ತು ಬೈಕ್‌ ವಶ

02:07 AM Jun 11, 2022 | Team Udayavani |

ಕೋಟ: ಉಡುಪಿ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳ ಹನ್ನೆರಡು ಬೈಕ್‌ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಬೈಕ್‌ ಕಳ್ಳರಿಬ್ಬರನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಒಂಬತ್ತು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

Advertisement

ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿನ ದ್ವಿಚಕ್ರ ವಾಹನ ಕಳ್ಳತನ ತಡೆಗಟ್ಟುವುದು ಹಾಗೂ ಪತ್ತೆ ಮಾಡುವ ಉದ್ದೇಶದಿಂದ ಜಿಲ್ಲಾ ಪೊಲೀಸ್‌ ಅಧೀಕ್ಷಕರ ನಿರ್ದೇಶನದಂತೆ ವಿಶೇಷ ತಂಡವು ಕೋಟ ಸರಹದ್ದಿನ ವಿವಿಧ ಭಾಗದಲ್ಲಿ ವಾಹನ ತಪಾಸಣೆ ಮತ್ತು ದಾಖಲೆ ಪರಿಶೀಲಿಸುತ್ತಿದ್ದ ಸಂದರ್ಭ ಜೂ. 9ರಂದು ವಡ್ಡರ್ಸೆ ಗ್ರಾಮದ ರೈಲ್ವೇ ಬ್ರಿಡ್ಜ್ ಬಳಿ ನಂಬರ್‌ ಪ್ಲೇಟ್‌ ಇಲ್ಲದ ವಾಹನವನ್ನು ಸಂಶಯಾಸ್ಪದವಾಗಿ ನಿಲ್ಲಿಸಿದ್ದು, ವಾಹನದ ಬಳಿ ಇದ್ದ ಇಬ್ಬರನ್ನು ದಾಖಲಾತಿಗಳ ಬಗ್ಗೆ ವಿಚಾರಿಸಿದಾಗ ಯಾವುದೇ ದಾಖಲಾತಿಗಳನ್ನು ಹಾಜರುಪಡಿಸದಿರುವುದರಿಂದ ತನಿಖೆ ನಡೆಸಿದ್ದು, ಆಗ ಅದು ಕಳ್ಳತನ ಮಾಡಿದ ಬೈಕ್‌ ಎನ್ನುವುದು ತಿಳಿದುಬಂದಿದೆ.

ಆಗ ಪ್ರಕರಣದ ಆರೋಪಿಗಳಾದ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ಅತ್ತಿಗುಡ್ಡೆ ನಿವಾಸಿ ಸೋಮಶೇಖರ (21) ಹಾಗೂ ಬಾಗಲಕೋಟೆ ಜಿಲ್ಲೆ ಹುನಗುಂಡ ತಾಲೂಕು ಹೊಸಮನೆ ನಿವಾಸಿ ಶಂಕರ ಗೌಡ (23) ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

ವಿಶೇಷ ತಂಡದ ಕಾರ್ಯಾಚರಣೆ
ಎಸ್ಪಿ ವಿಷ್ಣುವರ್ಧನ ಎನ್‌., ಎಎಸ್ಪಿ ಎಸ್‌.ಟಿ. ಸಿದ್ದಲಿಂಗಪ್ಪ ಅವರ ಮಾರ್ಗದರ್ಶನದಂತೆ, ಡಿವೈಎಸ್ಪಿ ಸುಧಾಕರ ಎಸ್‌. ನಾಯ್ಕ ಅವರ ನಿರ್ದೇಶನದಂತೆ ಈ ಕಾರ್ಯಾಚರಣೆ ನಡೆದಿದೆ. ಬ್ರಹ್ಮಾವರ ಸಿಪಿಐ ಅನಂತ ಪದ್ಮನಾಭ, ಕೋಟ ಎಸ್ಸೆ„ ಮಧು ಬಿ.ಇ., ಪುಷ್ಪಾ, ಪ್ರೊಬೆಷನರಿ ಎಸ್ಸೆ„ ಮಹಾಂತೇಶ್‌, ಪುನೀತ್‌, ಹಿರಿಯಡ್ಕ ಠಾಣೆಯ ಪ್ರೊಬೆಷನರಿ ಎಸ್ಸೆ„ ಮಂಜುನಾಥ ಮರಬದ, ಕೋಟ ಎಸ್ಸೆ„ ರವಿ ಕುಮಾರ್‌, ಸಿಬಂದಿ ರಾಘವೇಂದ್ರ, ಪ್ರಸನ್ನ, ರಾಜೇಶ್‌, ಕೃಷ್ಣ ಹಾಗೂ ಬ್ರಹ್ಮಾವರ ವೃತ್ತ ಕಚೇರಿಯ ಪ್ರದೀಪ್‌ ನಾಯಕ್‌ ಹಾಗೂ ಉಡುಪಿ ನಗರ ಠಾಣೆಯ ಸತೀಶ , ಸಂತೋಷ ರಾಥೋಡ್‌, ಕಿರಣ, ಹನುಮಂತ, ಎಸ್ಪಿ ಕಚೇರಿ ತಾಂತ್ರಿಕ ವಿಭಾಗದ ಸಿಬ್ಬಂದಿ ದಿನೇಶ ಪ್ರಕರಣವನ್ನು ಭೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಹನ್ನೆರಡು ಪ್ರಕರಣ ಬಯಲಿಗೆ
ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದಾಗ ಅವರು ಕಳೆದ ಮೂರು ವರ್ಷಗಳಿಂದ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದು, ತಿಳಿದುಬಂದಿದೆ. ಕಾರ್ಮಿಕರಾಗಿ ದುಡಿಯಲು ಬಂದವರು ಉಡುಪಿ ನಗರ ಠಾಣೆಯಲ್ಲಿ ಏಳು, ಬ್ರಹ್ಮಾವರ ಠಾಣೆಯ ಒಂದು, ಶಂಕರಾನಾರಾಯಣ ಠಾಣೆಯ ಒಂದು, ಶೃಂಗೇರಿ ಠಾಣೆಯ ಒಂದು, ವಿಜಯನಗರದ ಜಿಲ್ಲೆಯ ಇಟಗಿ ಠಾಣೆಯ ಒಂದು ಮತ್ತು ದಾವಣಗೆರೆ ಠಾಣೆಯ ಒಂದು ಪ್ರಕರಣ ಸೇರಿದಂತೆ ಒಟ್ಟು 12 ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದು, ತನಿಖೆಯಿಂದ ತಿಳಿದುಬಂದಿದೆ. ಇವುಗಳಲ್ಲಿ ಮೂರು ಪಲ್ಸರ್‌ ಬೈಕ್‌, ಐದು ಸ್ಪೆ$Éಂಡರ್‌ ಬೈಕ್‌ ಮತ್ತು ಒಂದು ಹೀರೋ ಡಿಲಕ್ಸ್‌ ಬೈಕ್‌ ವಶಪಡಿಸಿಕೊಳ್ಳಲಾಗಿದ್ದು, ಸ್ವಾ ಧೀನಪಡಿಸಿದ ಸೊತ್ತುಗಳ ಮೌಲ್ಯ ಅಂದಾಜು ನಾಲ್ಕೂವರೆ ಲಕ್ಷ ರೂ. ಆಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next