ಸುಳ್ಯ: ಬೇರೊಂದು ವಾಹನಕ್ಕೆ ಸೈಡ್ ಕೊಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕೇರಳದ ಸರಕಾರಿ ಸಾರಿಗೆ ಬಸ್ ತೋಟಕ್ಕೆ ಉರುಳಿರುವ ಘಟನೆ ಜೂ. 21ರಂದು ಸುಳ್ಯ ಸಮೀಪದ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಎಂಬಲ್ಲಿ ಸಂಭವಿಸಿದೆ.
ಕಾಸರಗೋಡಿನಿಂದ ಸುಳ್ಯಕ್ಕೆ ಬರುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ಬಸ್ ಇದಾಗಿದೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ತೋಟಕ್ಕೆ ನುಗ್ಗಿ ನಿಂತಿದೆ. ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಕುರುಗೋಡು: ಲಾರಿ – ಬೈಕ್ ನಡುವೆ ಅಪಘಾತ; ಟ್ರಾಫಿಕ್ ಪೊಲೀಸ್ ಸ್ಥಳದಲ್ಲೇ ಸಾವು
ಗಾಯಾಳು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು.
Related Articles