Advertisement

ಉಳ್ಳಾಲ: ಹತ್ತಿ ದಾಸ್ತಾನು ಗೋದಾಮಿಗೆ ಆಕಸ್ಮಿಕ ಬೆಂಕಿ : 8 ಲಕ್ಷಕ್ಕೂ ಹೆಚ್ಚು ನಷ್ಟ

09:02 PM Jun 21, 2022 | Team Udayavani |

ಉಳ್ಳಾಲ: ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್‌ನಲ್ಲಿರುವ ಗ್ರಾಮ ಪಂಚಾಯತ್‌ ಕಚೇರಿ ಬಳಿಯ ಹತ್ತಿ ದಾಸ್ತಾನು ಗೋದಾಮು ಮತ್ತು ಹತ್ತಿಯಿಂದ ಉತ್ಪನ್ನಗಳ ತಯಾರಿಕಾ ಘಟಕಕ್ಕೆ ಆಕಸ್ಮಿಕ ಬೆಂಕಿ ತಗುಲಿ ಭಾಗಶಃ ಸುಟ್ಟು ಹೋದ ಘಟನೆ ಮಂಗಳವಾರ ಸಂಜೆ ಸಂಭವಿದ್ದು, ಸುಮಾರು 8 ಲಕ್ಷಕ್ಕೂ ಹೆಚ್ಚು ನಷ್ಟ ಅಂದಾಜಿಸಲಾಗಿದೆ.

Advertisement

ಉಳ್ಳಾಲದ ಉದ್ಯಮಿ ನೌಮಾನ್‌ ಮಾಲೀಕತ್ವದ ಕೋಡಿ ಎಂಟರ್‌ ಪ್ರೈಸಸ್ ಹತ್ತಿ ದಾಸ್ತಾನು ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು , ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ.

ಮಂಗಳೂರಿನ ಪಾಂಡೇಶ್ವರದಿಂದ ಅಗ್ನಿಶಾಮಕದಳ ಆಗಮಿಸಿದಾಗ ಗೋದಾಮು ಸಹಿತ ಯಂತ್ರಗಳು ಭಾಗಶ: ಸುಟ್ಟು ಹೋಗಿತ್ತು. ಸ್ಥಳಕ್ಕೆ ಕೊಣಾಜೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next