ಪಡುಬಿದ್ರಿ: ಅಪ್ರಾಪ್ತ ವಯಸ್ಕ ಬಾಲಕಿಯನ್ನು ಎರಡು ಬಾರಿ ಅಪಾರ್ಟ್‌ಮೆಂಟ್‌ಗೆ ಕರೆತಂದು ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ನೀಡಿದ್ದ ಹೆಜಮಾಡಿ ಆಲಡೆ ಬಳಿಯ ನಿವಾಸಿ ಅಬ್ದುಲ್ ರೆಹಮಾನ್ ಅವರ ಮಗ ಯಾಸಿನ್ (19) ಎಂಬಾತನನ್ನು ಪೋಕ್ಸೊ ಪ್ರಕರಣದಡಿ ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಉಡುಪಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ಸಹಕರಿಸಿದ್ದ ಅಪ್ರಾಪ್ತ ವಯಸ್ಕ ಬಾಲಕನನ್ನೂ ವಶಪಡಿಸಿಕೊಂಡಿರುವ ಪೊಲೀಸರು ಆತನನ್ನು ಬಾಲಮಂದಿರಕ್ಕೆ ಸೇರಿಸಿದ್ದಾರೆ.
ಬಾಲಕಿಯನ್ನು ಬಸ್‌ನಲ್ಲಿ ಬರಲು ಹೇಳಿದ್ದ ಆರೋಪಿಯು ಬಸ್ಸಿಳಿದು ರಿಕ್ಷಾ ಮೂಲಕ ಹೆಜಮಾಡಿಯ ತಾನು ವಾಸವಿರುವ ಆಪಾರ್ಟ್‌ಮೆಂಟ್‌ಗೆ ಕರೆಸಿದ್ದನು. ಬಾಲಕಿಯನ್ನು ಮೇಲ್ಮಹಡಿಯ ಟೆರೇಸ್‌ನಲ್ಲಿರಿಸಿ ಲೈಂಗಿಕ ಕಿರುಕುಳ ನೀಡಿದ್ದ. ಈ ಕುರಿತಾಗಿ ಸ್ಥಳೀಯರು ಅನುಮಾನ ದಿಂದ ಪಡುಬಿದ್ರಿ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.
ಪೊಲೀಸರು ಸಕಾಲದಲ್ಲಿ ದಾಳಿ ನಡೆಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ವಿಚಾರಣೆ ನಡೆಸಿದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ವಿರುದ್ಧ ಬಾಲಕಿಯ ತಂದೆ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿ ಆಟೋರಿಕ್ಷಾವನ್ನೂ ವಶಕ್ಕೆ ಪಡೆಯಲಾಗಿದೆ.
ಉಡುಪಿ ಜಿಲ್ಲಾ ಎಡಿಶನಲ್ ಎಸ್ಪಿ ಎಸ್.ಟಿ. ಸಿದ್ದಲಿಂಗಪ್ಪ ಮಾರ್ಗದರ್ಶನದಲ್ಲಿ ಕಾಪು ಸಿಪಿಐ ಪೂವಯ್ಯ ಪ್ರಕರಣ ದಾಖಲಿಸಿಕೊಂಡಿದ್ದು, ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ತನಿಖೆ ಮುಂದುವರಿಸಿದ್ದಾರೆ.