Advertisement

ಸುಬ್ರಹ್ಮಣ್ಯ: ಮದುವೆಯಾಗುವುದಾಗಿ ಹೇಳಿ ಅತ್ಯಾಚಾರ

11:55 PM Aug 03, 2022 | Team Udayavani |

ಸುಬ್ರಹ್ಮಣ್ಯ: ವಿವಾಹಿತ ಮಹಿಳೆಯನ್ನು ಅತ್ಯಾಚಾರಗೈದು ಮದುವೆಯಾಗುತ್ತೇನೆಂದು ನಂಬಿಸಿ 1.70 ಲಕ್ಷ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಸಂತ್ರಸ್ತೆಯು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಮೇ 20ರಂದು ರಾತ್ರಿ 10 ಗಂಟೆಗೆ ಪವನ್‌ ಮದ್ಯಪಾನ ಮಾಡಿಕೊಂಡು ಯುವತಿಯನ್ನು ಅತ್ಯಾಚಾರಗೈದಿದ್ದಾನೆ. ಈ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡುತ್ತೇನೆ ಎಂದಾಗ ನಾನು ನಿನ್ನನ್ನು ಮದುವೆಯಾಗುತ್ತೇನೆ.

ಪೊಲೀಸ್‌ ಕಂಪ್ಲೇಟ್‌ ಮಾಡಬೇಡ ಎಂದು ಹೇಳಿ ವಕೀಲರ ಮುಖಾಂತರ ಲಿಖಿತ ಒಪ್ಪಿಗೆ ನೀಡಿದ್ದು, ಇದಕ್ಕಾಗಿ ಮಹಿಳೆಯಿಂದ ಹಣವನ್ನು ಪಡೆದುಕೊಂಡು ಈಗ ಮದುವೆಯಾಗುವುದಿಲ್ಲ ಎಂದು ವಂಚಸಿದ್ದಾನೆ ಎಂದು ದೂರಲಾಗಿದೆ. ಸುಬ್ರಹ್ಮಣ್ಯ ಪೊಲೀಸ್‌ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಾರೆ.

 

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next