Advertisement

ಅಪಘಾತಪಡಿಸಿ ಪಾದಚಾರಿಯ ಸಾವಿಗೆ ಕಾರಣನಾದ ಆರೋಪಿಗೆ ಶಿಕ್ಷೆ

01:02 AM Aug 25, 2022 | Team Udayavani |

ಉಡುಪಿ: ಅಜಾಗರೂಕತೆಯಿಂದ ಬೈಕ್‌ ಚಲಾಯಿಸಿ ರಸ್ತೆ ಬದಿ ನಿಂತಿದ್ದ ಪಾದಚಾರಿಯ ಸಾವಿಗೆ ಕಾರಣವಾದ ಆರೋಪಿಗೆ ನಗರದ 1ನೇ ಹೆಚ್ಚುವರಿ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

Advertisement

2018ರ ಡಿ. 17ರಂದು ಅಪರಾಹ್ನ 3.50ರ ಸುಮಾರಿಗೆ ಉಪ್ಪೂರಿನ ಮೂಡು ಅಮ್ಮುಂಜೆಯ ಆಶಿಶ್‌ ಶೆಟ್ಟಿ ಎಂಬಾತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಜಂಕ್ಷನ್‌ ಬಸ್‌ ನಿಲ್ದಾಣದ ಬಳಿ ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಬೈಕ್‌ ಚಲಾಯಿಸಿ ರಸ್ತೆ ಬದಿ ನಿಂತಿದ್ದ ನಾಗೇಶ್‌ ಡಿ. ಪ್ರಭು ಅವರಿಗೆ ಢಿಕ್ಕಿ ಹೊಡೆದ ಪರಿಣಾಮ, ನಾಗೇಶ್‌ ಡಿ. ಪ್ರಭು ಅವರು ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡು ಮೃತಪಟ್ಟಿದ್ದರು. ಉಡುಪಿ ಸಂಚಾರ ಠಾಣೆಯ ಪೊಲೀಸ್‌ ವೃತ್ತ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ 1ನೇ ಹೆಚ್ಚುವರಿ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್‌ ಪ್ರಕಾಶ್‌ ಅವರು ಆಶಿಶ್‌ ಶೆಟ್ಟಿಗೆ 2 ವರ್ಷ ಕಾರಾಗೃಹ ವಾಸ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next